Friday, May 10, 2024
spot_imgspot_img
spot_imgspot_img

ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರ ಬಂಧನ : 15 ಲಕ್ಷ ರೂ. ಮೌಲ್ಯದ ಸೊತ್ತು ವಶ.

- Advertisement -G L Acharya panikkar
- Advertisement -

ಮಂಗಳೂರು: ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮಂಗಳೂರು ನಗರದ ಫಳ್ನೀರ್ ಎಂಬಲ್ಲಿ ನಡೆದಿದೆ.

ಮಂಜೇಶ್ವರ ಉದ್ಯಾವರದ ಮೊಹಮ್ಮದ್ ಹನೀಫ್ ಎ.ಎನ್ ಹಾಗೂ ಸೈಯದ್ ಫೌಝಾನ್, ಕುಂಜತ್ತೂರಿನ ಸಿರಾಜುದ್ದೀನ್ ಅಬೂಬಕರ್, ಮಂಜೇಶ್ವರ ಮಿಯಾಪದವಿನ ಇಬ್ರಾಹಿಂ ಅರ್ಷಾದ್ ವಿ.ಕೆ ಬಂಧಿತ ಆರೋಪಿಗಳು.
ಬೆಂಗಳೂರಿನಿಂದ ಎಂಡಿಎಂ ಮಾದಕ ವಸ್ತುವನ್ನು ಖರೀದಿಸಿಕೊಂಡು ಮಂಗಳೂರು ನಗರದ ಫಳ್ನೀರ್ ಪರಿಸರದ ಕಾರಿನಲ್ಲಿ ಮೂವರು ವ್ಯಕ್ತಿಗಳು ಸೇರಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿಎ ಹೆಗಡೆ ಅವರ ನೇತೃತ್ವದ ಸಿಸಿಬಿ ಪೊಲೀಸರು ದಾಳಿ ನಡೆಸಿ ಮಾದಕ ವಸ್ತುವನ್ನು ಸಹಿತ ಇತರ ಸೊತ್ತುಗಳೊಂದಿಗೆ ನಾಲ್ವರನ್ನು ಬಂಧಿಸಲಾಗಿದೆ.

ಪ್ರಕರಣವೊಂದರಲ್ಲಿ ರೂ. 5,00,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, ನಗದು ರೂ. 4000, ಕಾರು-1, ಮೊಬೈಲ್ ಫೋನುಗಳು-3, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 10,94,500 ರೂ. ಆಗಬಹುದು. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಮಂಗಳೂರು ನಗರದ ಅಳಪೆ ಗ್ರಾಮದ ಕಂಕನಾಡಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ವ್ಯಕ್ತಿಯೊಬ್ಬನು ಅಕ್ರಮವಾಗಿ ಮಾದಕ ವಸ್ತು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ನಿಷೇದಿತ ಮಾದಕ ವಸ್ತುವನ್ನು ಹೊಂದಿದ್ದ ಇಬ್ರಾಹಿಂ ಅರ್ಷಾದ್ ವಿ.ಕೆ ಎಂಬಾತನನ್ನು ಬಂಧಿಸಿದ್ದಾರೆ. ಈತನಿಂದ ರೂ. 5,00,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, ನಗದು ರೂ. 1000, ಮೊಬೈಲ್ ಫೋನುಗಳು-1, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿ ಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 5,11,500 ಆಗಬಹುದು. ಆರೋಪಿಯ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

- Advertisement -

Related news

error: Content is protected !!