Saturday, April 20, 2024
spot_imgspot_img
spot_imgspot_img

ಮಂಗಳೂರು: ಮರವೂರು ಸೇತುವೆಯ ದುರಸ್ತಿ ಕಾಮಗಾರಿ ಬಹುತೇಕ ಪೂರ್ಣ; ಜು.30ರಿಂದ ಲಘು ವಾಹನ ಸಂಚಾರಕ್ಕೆ ಮುಕ್ತ ಸಾಧ್ಯತೆ!

- Advertisement -G L Acharya panikkar
- Advertisement -

ಮಂಗಳೂರು: ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿದ ಮರವೂರು ಸೇತುವೆಯ ಕುಸಿದ ಪಿಲ್ಲರ್‌ ದುರಸ್ತಿ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.

ಲಘು ವಾಹನ ಸಂಚಾರಕ್ಕೆ ಜು.30ರಿಂದ ಅನುವುಮಾಡುವ ನಿರೀಕ್ಷೆಯಿದೆ.

ಪಿಡಬ್ಲ್ಯೂಡಿ ಇಲಾಖೆಯ ತಜ್ಞ ಇಂಜಿನಿಯರ್‌ಗಳ ಸಲಹೆಯಂತೆ ಸೇತುವೆಯ ಪಿಲ್ಲರ್ ಅನ್ನು ಹೈಡ್ರೋಲಿಕ್ ಜ್ಯಾಕ್ ಬಳಸಿ ಮೇಲಕ್ಕೆತ್ತಿ ಯಥಾಸ್ಥಿತಿಗೆ ತರಲಾಗಿದ್ದು, ಇದೀಗ ದುರಸ್ತಿ ಕೆಲಸ ಬಹುತೇಕ ಪೂರ್ಣಗೊಂಡಿದೆ.

ಮರವೂರು ಸೇತುವೆಯಲ್ಲಿ ಲಘು ವಾಹನಗಳು ಸಾಗಬಹುದೇ ಎಂಬುದನ್ನು ಪರೀಕ್ಷಿಸಲು ಗುರುವಾರ ತಜ್ಞರ ಉಪಸ್ಥಿತಿಯಲ್ಲಿ ರೋಡ್ ಟೆಸ್ಟ್ ನಡೆಸಲಾಗುತ್ತದೆ. ಈ ಪರೀಕ್ಷೆ ಯಶಸ್ವಿಯಾದರೆ ಶುಕ್ರವಾರದಿಂದಲೇ ಲಘು ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

driving
- Advertisement -

Related news

error: Content is protected !!