Thursday, May 16, 2024
spot_imgspot_img
spot_imgspot_img

ಮಂಗಳೂರು: ಎಂಡಿಎಂಎ ಮಾದಕ ವಸ್ತು ಮಾರಾಟ; ಆರೋಪಿಗಳು ಪೊಲೀಸ್ ವಶಕ್ಕೆ..!

- Advertisement -G L Acharya panikkar
- Advertisement -

ಮಂಗಳೂರು: ಸ್ಕೂಟರ್ ನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಿದ ಘಟನೆ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ಬಳಿ ನಡೆದಿದೆ.

ಬಂಧಿತ ಆರೋಪಿಗಳನ್ನು ಬಜಾಲ್ನ ಅಶ್ಪಾಕ್ ಯಾನೆ ಜುಟ್ಟು ಅಶ್ಪಾಕ್ (27) ಮತ್ತು ಕಾಟಿಪಳ್ಳದ ಉಮರ್ ಫಾರೂಕ್ ಇರ್ಫಾನ್ (26) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ ಮಾದಕವಸ್ತು ಎಂಡಿಎಂಎ ಹಾಗೂ ಕೃತ್ಯಕ್ಕೆ ಬಳಸಿದ ಸ್ಕೂಟರ್ ಮತ್ತು ಮೊಬೈಲ್ ಫೋನ್ ಸೇರಿ ಒಟ್ಟು 1,92,800 ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಪಡೀಲ್ ಬಳಿ ಸ್ಕೂಟರ್ ನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಇನ್ನು ಆರೋಪಿ ಅಶ್ಫಾಕ್ ಮೇಲೆ ಮಂಗಳೂರು ನಗರದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ, ಕಂಕನಾಡಿ ನಗರ ಪೊಲೀಸ್ ಠಾಣೆ, ಉಳ್ಳಾಲ ಪೊಲೀಸ್ ಠಾಣೆ, ಸುರತ್ಕಲ್ ಪೊಲೀಸ್, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ ,ದರೋಡೆ ಸುಲಿಗೆ ದೋಂಬಿಯಂತಹ ಒಟ್ಟು 12 ಪ್ರಕರಣಗಳು ದಾಖಲಾಗಿವೆ.

ಇನ್ನು ಮತ್ತೊಬ್ಬ ಆರೋಪಿ ಇರ್ಫಾನ್ ಮೇಲೆ ಮಂಗಳೂರು ದಕ್ಷಿಣ, ಮಂಗಳೂರು ಗ್ರಾಮಾಂತರ, ಉಳ್ಳಾಲ ಪೊಲೀಸ್ ಠಾಣೆ, ಮೂಡಬಿದ್ರೆ ಪೊಲೀಸ್ ಠಾಣೆ, ಬರ್ಕೆ ಪೊಲೀಸ್ ಠಾಣೆ, ಕೊಣಾಜೆ ಪೊಲೀಸ್ ಠಾಣೆ, ಸುರತ್ಕಲ್ ಪೊಲೀಸ್ ಠಾಣೆ, ಕಾರ್ಕಳ ನಗರ ಪೊಲೀಸ್ ಠಾಣೆ, ಶಿರ್ವ ಪೊಲೀಸ್ ಠಾಣೆ, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ, ಮಂಗಳೂರು ಉತ್ತರ ಪೊಲೀಸ್ ಠಾಣೆ, ಮಂಗಳೂರು ಪೂರ್ವ ಪೊಲೀಸ್ ಠಾಣೆಗಳಲ್ಲಿ ಕೊಲೆಯತ್ನ, ದರೋಡೆ, ಸುಲಿಗೆ, ಸರಗಳ್ಳತನ, ದೊಂಬಿ, ವಾಹನ ಕಳ್ಳತನದಂತಹ ಒಟ್ಟು 25 ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!