Thursday, May 2, 2024
spot_imgspot_img
spot_imgspot_img

ಮಂಗಳೂರು: ಶೆಲ್‌ ಕಂಪೆನಿಯ ಹಡಗಿನ ಮೇಲೆ ಕಡಲ್ಗಳ್ಳರ ಕ್ಷಿಪಣಿ ದಾಳಿ..!

- Advertisement -G L Acharya panikkar
- Advertisement -

ಮಂಗಳೂರು: ಮಂಗಳೂರಿನಿಂದ ಹೊರಟ ಶೆಲ್‌ ಕಂಪೆನಿಯ ವೈಮಾನಿಕ ಇಂಧನ ಹೊತ್ತ ಹಡಗಿನ ಮೇಲೆ ಕಡಲ್ಗಳ್ಳರು ಕೆಂಪು ಸಮುದ್ರವನ್ನು ಸಂಪರ್ಕಿಸುವ ಬಾಬ್ ಎಲ್-ಮಾಂಡೆಬ್ ಜಲಸಂಧಿಯಲ್ಲಿ ಕ್ಷಿಪಣಿ ದಾಳಿ ನಡೆಸಿದ್ದಾರೆ.

ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಉತ್ಪಾದನೆಯಾದ ವೈಮಾನಿಕ ಇಂಧನವನ್ನು ಶೆಲ್‌ ಕಂಪೆನಿಯು ಖರೀದಿಸಿ ಡಿ.6 ರಂದು ನೆದರ್ಲೆಂಡ್‌ಗೆ ಸಾಗಾಟ ಮಾಡುತ್ತಿತ್ತು. ಈ ವೇಳೆ ಕಡಲ್ಗಳ್ಳರು ದಾಳಿ ನಡೆಸಿದ್ದಾರೆ. ಆದರೆ ಅದೃಷ್ಟವಶಾತ್‌ ಕಡಲ್ಗಳ್ಳರ ಗುರಿ ತಪ್ಪಿದ ಪರಿಣಾಮ ಘಟನೆಯಿಂದ ಯಾವುದೇ ನಾಶ-ನಷ್ಟ ಸಂಭವಿಸಿಲ್ಲ ಎಂದು ಬ್ರಿಟನ್ ರಕ್ಷಣಾ ಪಡೆಯೂ ದೃಢಪಡಿಸಿದೆ. ಇನ್ನು ಈ ಘಟನೆ ನಡೆದ ಸಂದರ್ಭದಲ್ಲಿ ಸಮೀಪದಲ್ಲಿ ಇದ್ದ ಅಮೆರಿಕದ ಸಮರ ನೌಕೆ ಶಂಕಿತ ಹೌದಿ ಡ್ರೋನ್ ಅನ್ನು ಹೊಡೆದುರುಳಿಸಿದೆ ಎಂದೂ ವರದಿ ತಿಳಿಸಿದೆ.

- Advertisement -

Related news

error: Content is protected !!