Friday, June 19, 2026
spot_imgspot_img
spot_imgspot_img

ಮಂಗಳೂರು: ಯುವತಿ ನಾಪತ್ತೆ; ಪತ್ತೆಗಾಗಿ ಮನವಿ

- Advertisement -
- Advertisement -

ಮಂಗಳೂರು: ಉಳ್ಳಾಲ ತಾಲೂಕು ಕೊಣಾಜೆ ಗ್ರಾಮದ ನಡುಪದವು ಗ್ರಾಮದ ಯುವತಿಯೋರ್ವಳು ಕಾಣೆಯಾದ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಫ್ರಿನಾ (20)ರವರು ಕಾಣೆಯಾದ ಯುವತಿ. ಬಿಡಾರ ಮನೆಯಲ್ಲಿ ವಾಸವಾಗಿರುವ ಈಕೆ ಅ.30ರಂದು ಸಂಜೆ 3.30 ಗಂಟೆಗೆ ಉಳ್ಳಾಲ ತಾಲೂಕು ಕೊಣಾಜೆ ಗ್ರಾಮದ ನಡುಪದವು ಎಂಬಲ್ಲಿಂದ ಕಾಣೆಯಾಗಿದ್ದಾರೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಕಾಣೆಯಾದ ಅಫ್ರಿನಾ ಪತ್ತೆಯಾದಲ್ಲಿ ಪೊಲೀಸ್ ಆಯುಕ್ತರ ಕಛೇರಿಯ ಮಂಗಳೂರು ನಗರ ನಿಯಂತ್ರಣ ಕೊಠಡಿಗೆ ದೂರವಾಣಿ ಸಂಖ್ಯೆ 0824-2220800 ಅಥವಾ ಕೊಣಾಜೆ ಪೊಲೀಸ್ ಠಾಣೆಯ 0824-2220536, 9480802350 ನೇ ಸಂಖ್ಯೆಗೆ ಮಾಹಿತಿ ನೀಡಬೇಕಾಗಿ ಕೋರಲಾಗಿದೆ.

- Advertisement -

Related news

error: Content is protected !!