Thursday, June 18, 2026
spot_imgspot_img
spot_imgspot_img

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಅಲಿ ನಾಪತ್ತೆ- ಕೂಳೂರು ಸೇತುವೆ ಬಳಿ ಕಾರು ಪತ್ತೆ..!

- Advertisement -
- Advertisement -
This image has an empty alt attribute; its file name is mk-panikar-1024x767.jpeg

ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ (52) ನಾಪತ್ತೆಯಾಗಿದ್ದು, ನಗರದ ಕೂಳೂರಿನ ಸೇತುವೆಯ ಮೇಲೆ ಅವರ ಕಾರು ಪತ್ತೆಯಾಗಿದೆ. ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.

ಶನಿವಾರ ನಸುಕಿನ ವೇಳೆ 3ಗಂಟೆ ಸುಮಾರಿಗೆ ಮುಮ್ತಾಜ್ ಅಲಿ ಮನೆಯಿಂದ ತಮ್ಮ ಬಿಎಂಡಬ್ಲ್ಯು ಕಾರಿನಲ್ಲಿ ತೆರಳಿದ್ದರು. ರವಿವಾರ ಬೆಳ್ಳಂಬೆಳಗ್ಗೆ 5ಗಂಟೆಗೆ ಕೂಳೂರು ಸೇತುವೆ ಮೇಲೆ ಕಾರು ಪತ್ತೆಯಾಗಿದೆ. ಆದರೆ ಅವರು ನಾಪತ್ತೆಯಾಗಿದ್ದರು. ಅವರ ಫೋನ್ ಕೂಡಾ ಸ್ವಿಚ್ ಆಫ್ ಆಗಿತ್ತು. ಪುತ್ರಿಗೆ ಈ ವಿಚಾರ ತಿಳಿದು ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮುಮ್ತಾಜ್ ಅಲಿಯವರು ಸೇತುವೆಯಿಂದ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು, ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್, ಅಗ್ನಿಶಾಮಕದಳ ನದಿಯಲ್ಲಿ ಶೋಧ ಕಾರ್ಯ ನಡೆಸುತ್ತಿದೆ. ಎಫ್‌ಎಸ್‌ಎಲ್ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೇರಿದಂತೆ ಕುಟುಂಬಸ್ಥರು ಭೇಟಿ ನೀಡಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮೀಷನ‌ರ್ ಅನುಪಮ್ ಅಗರ್ವಾಲ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!