- Advertisement -
- Advertisement -
ಮಂಗಳೂರು: ನೂತನ ಉಪಪೊಲೀಸ್ ಆಯುಕ್ತರಾಗಿ ವಿನಯ್ ಗಾಂವ್ಕರ್ ಅವರನ್ನು ನಿಯುಕ್ತಿಗೊಳಿಸಿ ರಾಜ್ಯ ಸರಕಾರ ಆದೇಶ ಮಾಡಿದೆ. ನಗರ ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಲಕ್ಷ್ಮೀಗಣೇಶ್ ಅವರನ್ನು ಬೆಂಗಳೂರಿಗೆ ವರ್ಗಾವಣೆಗೊಳಿಸಲಾಗಿದ್ದು, ಅವರ ಸ್ಥಾನಕ್ಕೆ, ವಿನಯ್ ಗಾಂವ್ಕರ್ ಅವರನ್ನು ನಿಯುಕ್ತಿಗೊಳಿಸಿ ರಾಜ್ಯ ಸರಕಾರ ಆದೇಶ ಮಾಡಿದೆ.

ರಾಜ್ಯ ಪೊಲೀಸ್ ಇಲಾಖೆಯ ಐಪಿಎಸ್, ನಾನ್ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಶುಕ್ರವಾರ ನಡೆದಿದ್ದು, ಮಂಗಳೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತ ಲಕ್ಷ್ಮೀ ಗಣೇಶ್ ಸೇರಿದಂತೆ 8 ಅಧಿಕಾರಿಗಳನ್ನು ವರ್ಗಾವಣೆಗೊಳಿಸಲಾಗಿದೆ.

- Advertisement -