Thursday, April 25, 2024
spot_imgspot_img
spot_imgspot_img

ಮಂಗಳೂರು: ಐಸಿಸ್ ಜೊತೆ ನಂಟು..! ಮಾಜಿ ಕೈ ಶಾಸಕನ ಮಗನ ನಿವಾಸಕ್ಕೆ ಎನ್‌ಐಎ ದಾಳಿ

- Advertisement -G L Acharya panikkar
- Advertisement -

ಮಂಗಳೂರು: ಉಳ್ಳಾಲದ ಮಾಜಿ ಶಾಸಕನ ಪುತ್ರನ ಮನೆಗೆ ಬೆಳ್ಳಂಬೆಳಗ್ಗೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಿರಿಯಾ ಮೂಲದ ಐಸಿಸ್ ಉಗ್ರ ಸಂಘಟನೆಯ ಕುರಿತು ನಂಟು ಇರುವ ಶಂಕೆಯ ಹಿನ್ನಲೆ ದಾಳು ನಡೆದಿದೆ. ನಾಲ್ಕು ಕಾರುಗಳಲ್ಲಿ 25 ಮಂದಿಯಿದ್ದ ತಂಡ ದಾಳಿ ನಡೆಸಿದೆ. ಶಾಸಕರ ಮೊಮ್ಮಗಳು ಕೇರಳದಲ್ಲಿ ನಾಪತ್ತೆಯಾಗಿದ್ದು ಐಸಿಸ್ ಸೇರಿದ್ದಾಗಿ ಹೇಳಲಾಗಿತ್ತು…! ಇವರ ಕುಟುಂಬದವರು ಐಸಿಸ್ ಸಂಬಂಧಿಸಿದ ಯೂಟ್ಯೂಬ್ ಚಾನೆಲ್ ಗಳನ್ನು ಸಬ್‌ಸ್ಕ್ರೈಬ್ ಮಾಡಿದ್ದರು..?!

ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರ ಬಿ.ಎಂ.ಬಾಷಾ ಎಂಬವರ ಮನೆಗೆ ಇಂದು ನಸುಕಿನಲ್ಲಿ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಿಂದ ಆಗಮಿಸಿದ ಅಧಿಕಾರಿಗಳು ಮನೆಗೆ ಬಂದು ತನಿಖೆ ಕೈಗೊಂಡಿದ್ದಾರೆ. ಈ ಮನೆಯಲ್ಲಿ ಇದಿನಬ್ಬ ಅವರ ಪುತ್ರ ಬಿ.ಎಂ.ಬಾಷಾ ಎಂಬವರು ತಮ್ಮ ಕುಟುಂಬದ ಜೊತೆಗೆ ವಾಸವಿದ್ದಾರೆ. ಸಿರಿಯಾ ಮೂಲದ ಐಸಿಸ್ ಉಗ್ರ ಸಂಘಟನೆಯ ಕುರಿತು ನಂಟು ಇರುವ ಶಂಕೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ.

ನಾಲ್ಕು ಕಾರುಗಳಲ್ಲಿ 25 ಮಂದಿಯಿದ್ದ ತಂಡ ಉಳ್ಳಾಲದ ಮಾಸ್ತಿಕಟ್ಟೆಗೆ ಆಗಮಿಸಿದೆ. ಎನ್‌ಐಎ ಜೊತೆಗೆ ಮಂಗಳೂರಿನ ಸ್ಥಳೀಯ ಪೊಲೀಸರು ಕೂಡ ಭದ್ರತೆ ಒದಗಿಸಿದ್ದಾರೆ. ಇದಿನಬ್ಬ ಪುತ್ರ ಬಿ.ಎಂ. ಬಾಷಾ ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು. ಇವರ ಪುತ್ರರು ವಿದೇಶದಲ್ಲಿದ್ದಾರೆ. ಇವರ ಕುಟುಂಬದವರು ಐಸಿಸ್ ಸಂಬಂಧಿಸಿದ ಯೂಟ್ಯೂಬ್ ಚಾನೆಲ್ ಗಳನ್ನು ಸಬ್ ಸೈಬ್ ಮಾಡಿ, ಮೃದು ಧೋರಣೆ ಅನುಸರಿಸಿದ್ದರು ಎನ್ನಲಾಗಿದೆ.

ಅಲ್ಲದೆ, ಐಸಿಸ್ ಸಂಪರ್ಕ ಮತ್ತು ಜಮ್ಮು ಕಾಶ್ಮೀರದ ಉಗ್ರ ಸಂಘಟನೆಯ ಯುವಕರ ಜೊತೆ ಮೊಬೈಲ್ ಸಂಪರ್ಕ ಇರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ಎನ್‌ಐಎ ವಿಭಾಗದ ಡಿಐಜಿ ಶ್ರೇಣಿಯ ಅಧಿಕಾರಿ ಉಮಾ ಎಂಬವರ ನೇತೃತ್ವದಲ್ಲಿ ದಾಳಿ ನಡೆದಿದೆ.

- Advertisement -

Related news

error: Content is protected !!