Wednesday, April 24, 2024
spot_imgspot_img
spot_imgspot_img

ಮಂಗಳೂರು: ರಾತ್ರಿ ಕರ್ಫ್ಯೂನಿಂದ ‘ಹಿಂದೂ ಧಾರ್ಮಿಕ ಕಾರ್ಯಕ್ರಮಗಳಿಗೆ ವಿನಾಯಿತಿ ನೀಡಿ’ ವಿಶ್ವ ಹಿಂದೂ ಪರಿಷತ್!

- Advertisement -G L Acharya panikkar
- Advertisement -

ಮಂಗಳೂರು: ನಗರದಲ್ಲಿ ನಡೆಯಲಿರುವ ಹಿಂದೂ ಧಾರ್ಮಿಕ ಕಾರ್ಯಕ್ರಮಗಳಿಗೆ ರಾತ್ರಿ ಕರ್ಫ್ಯೂನಿಂದ ವಿನಾಯಿತಿ ನೀಡುವಂತೆ ವಿಶ್ವ ಹಿಂದೂ ಪರಿಷತ್‌, ನಗರ ಪೊಲೀಸ್‌ ಕಮಿಷನರ್‌ಗೆ ಮನವಿ ಮಾಡಿದೆ.

ಕೋವಿಡ್-19ನಿಂದಾಗಿ ಕಳೆದ ವರ್ಷವೂ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ಸಾಧ್ಯವಾಗಿಲ್ಲ. 2 ತಿಂಗಳಿಂದ ಸಾಕಷ್ಟು ಕಡೆ ದೈವಾರಾಧನೆಯ ನೇಮ, ಕೋಲ, ಜಾತ್ರೆ, ನಾಗಮಂಡಲ, ಬ್ರಹ್ಮಕಲಶ, ಯಕ್ಷಗಾನದಂತಹ ಧಾರ್ಮಿಕ ಕಾರ್ಯಕ್ರಮಗಳು ಆಯೋಜನೆಯಾಗಿವೆ ಎಂದು ತಿಳಿಸಿದೆ.

ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಸಿದ್ಧತೆಗಳನ್ನೂ ಮಾಡಲಾಗಿದೆ. ಆರ್ಥಿಕ ಸಮಸ್ಯೆಯ ನಡುವೆಯೂ ನಾಡಿನ ಒಳಿತಿಗಾಗಿ ಧಾರ್ಮಿಕ ಕಾರ್ಯಕ್ರಮಗಳಿಗೆ ಸಾಕಷ್ಟು ಖರ್ಚು ಮಾಡಲಾಗಿದೆ. ಒಂದು ವೇಳೆ ಕಾರ್ಯಕ್ರಮ ನಡೆಯದೇ ಇದ್ದರೆ, ಸಮಾಜದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗಲಿದೆ ಎಂದು ಹೇಳಿದೆ.

ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗಿದೆ. ಕೋವಿಡ್‌-19 ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು, ಕಾರ್ಯಕ್ರಮಗಳನ್ನು ನಡೆಸಲು ವಿನಾಯಿತಿ ನೀಡಬೇಕು ಎಂದು ಮನವಿ ಮಾಡಿದೆ.

ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್, ಜಿಲ್ಲಾ ಘಟಕದ ಕಾರ್ಯದರ್ಶಿ ಶಿವಾನಂದ್ ಮೆಂಡನ್ ಇದ್ದರು.

- Advertisement -

Related news

error: Content is protected !!