Monday, May 6, 2024
spot_imgspot_img
spot_imgspot_img

ಮಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್‌ ದಾಳಿ; ಇಬ್ಬರು ಮಹಿಳೆಯರ ರಕ್ಷಣೆ

- Advertisement -G L Acharya panikkar
- Advertisement -
vtv vitla

ಮಂಗಳೂರು: ಮಂಗಳೂರು ನಗರದ ಕುಲಶೇಖರದ ಕಾಂಪ್ಲೆಕ್ಸ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಮಂಗಳೂರು ನಗರ ಪೊಲೀಸರು ದಾಳಿ ನಡೆಸಿ ಅಲ್ಲಿದ್ದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.

ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕುಲಶೇಖರದ ಬಳಿ ಇರುವ ಅಬ್ಬಿ ಕಾಂಪ್ಲೆಕ್ಸ್ ನಲ್ಲಿ ಕೃಷ್ಣ ಎಂಬಾತನು ಫ್ಲಾಟ್ ಬಾಡಿಗೆಗೆ ಪಡೆದು ಮಂಡ್ಯ ನಿವಾಸಿ ಲಕ್ಕಪ್ಪ ಎಂಬಾತನ ಜೊತೆ ಸೇರಿ ಈ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎಂದು ಪೊಲಿಸರು ಮಾಹಿತಿ ನೀಡಿದ್ದಾರೆ. ದಾಳಿ ಸಂದರ್ಭ ಅಲ್ಲಿದ್ದ ಇಬ್ಬರು ಮಹಿಳೆಯರನ್ನು ಸಂರಕ್ಷಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ಮಂಡ್ಯ ಮೂಲದ ಲಕ್ಕಪ್ಪ (25 ವರ್ಷ),ಎಂಬಾತನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮತ್ತೋರ್ವ ಆರೋಪಿ ಕೃಷ್ಣ ಹಾಗೂ ಇತರರ ಬಗ್ಗೆ ಶೋಧ ಕಾರ್ಯ ಮುಂದುವರೆದಿದೆ.

- Advertisement -

Related news

error: Content is protected !!