Thursday, May 2, 2024
spot_imgspot_img
spot_imgspot_img

ಮಂಗಳೂರು: ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು

- Advertisement -G L Acharya panikkar
- Advertisement -

ಮಂಗಳೂರು: ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಸುರತ್ಕಲ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ನೇತೃತ್ವದ ಪೊಲೀಸ್ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಕೃಷ್ಣಾಪುರ ಮೂಲದ ಹಬೀಬ್ ಹಸನ್, (ಬಂಟ್ವಾಳದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ) ಮತ್ತು ಉಳ್ಳಾಲದ ಮೊಹಮ್ಮದ್ ಫೈಝಲ್ ಎಂದು ಗುರುತಿಸಲಾಗಿದೆ. ಇಬ್ಬರೂ ಈ ಹಿಂದೆ ಮಂಗಳೂರು ಮತ್ತು ಕಾರವಾರ ಮತ್ತು ಮಂಗಳೂರು ಜೈಲಿನಲ್ಲಿದ್ದು ಸಜೆ ಅನುಭವಿಸಿದ್ದರು. ಹಬೀಬ್ ಹಸನ್ ವಿರುದ್ಧ ಒಟ್ಟು 35ಪ್ರಕರಣಗಳು ದಾಖಲಾಗಿದ್ದು, ಮೊಹಮ್ಮದ್ ಫೈಝಲ್ ವಿರುದ್ಧ ಉಡುಪಿ ಮತ್ತು ದ.ಕ ಜಿಲ್ಲೆಯಲ್ಲಿ 15 ಪ್ರಕರಣಗಳು ದಾಖಲಾಗಿವೆ. ಇವರ ಬಂಧನಕ್ಕೆ ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಮಾರ್ಗದರ್ಶನದಲ್ಲಿ ತಂಡವನ್ನು ರಚಿಸಲಾಗಿತ್ತು. ಕಳವುಗೈದ ಮೋಟರ್ ಬೈಕ್‌ ಮತ್ತು ಸ್ಕೂಟರ್ ನಲ್ಲಿ ಅಲ್ಲಲ್ಲಿ ಕಳ್ಳತನ ಮಾಡುತ್ತಿದ್ದರು.

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ತಡಂಬೈಲ್ ಎಂಬಲ್ಲಿ ಪುಷ್ಪಾವತಿ ಎಂಬವರು ಜೂ.2 ರಂದು ಮುಂಜಾನೆ ತಮ್ಮ ಮನೆಯ ಕಂಪೌಂಡ್ ಒಳಭಾಗದಲ್ಲಿದ್ದ ಬಾವಿಯಿಂದ ನೀರು ಸೇದುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಅವರ ಕುತ್ತಿಗೆಯಲ್ಲಿದ್ದ ಅಂದಾಜು 1.25 ಲಕ್ಷ ರೂ. ಬೆಲೆಯ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದರು. ಈ ಪ್ರಕರಣದ ಬೆನ್ನು ಹತ್ತಿದ್ದ ಪೊಲೀಸರಿಗೆ ಕಳ್ಳರು ಕದ್ದ ಚಿನ್ನಾಭರಣವನ್ನು ಮಂಗಳೂರು ನಗರ ಮಾರಾಟಕ್ಕೆ ಯತ್ನಿಸಿ ವಿಫಲರಾಗಿ, ಸುರತ್ಕಲ್ ನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿತ್ತು. ಹೀಗಾಗಿ ಮಾದವ ನಗರ ಕೊಡಿಪ್ಪಾಡಿ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿರುವಾಗ, ದಿಚಕ್ರವಾಹನವೊಂದನ್ನು ನಿಲ್ಲಿಸಲು ಸೂಚಿಸಿದಾಗ ಸವಾರರಿಬ್ಬರು ವಾಹನದಿಂದ ಇಳಿದು ಓಡಿದ್ದರು. ಇವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಸಿದ 13 ಕಳವು ಪ್ರಕರಣಗಳು ಬೆಳಕಿಗೆ ಬಂದಿದೆ ಆರೋಪಿಗಳಿಂದ ಒಟ್ಟು 12ಲಕ್ಷದ 48 ಸಾವಿರದ 550 ಮೌಲ್ಯದ ಚಿನ್ನಾಭರಣಗಳನ್ನು 1ಲಕ್ಷದ 34ಸಾವಿರ ಮೌಲ್ಯದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಯಸ್ಸಾದ ಮಹಿಳೆಯರನ್ನು ಗುರಿಯಾಗಿಸುತ್ತಿದ್ದ ಆರೋಪಿಗಳು ಕದ್ದ ದ್ವಿಚಕ್ರ ವಾಹನಗಳನ್ನು ಚೈನ್ ಸ್ನ್ಯಾಚಿಂಗ್‌ಗೆ ಬಳಸುತ್ತಿದ್ದರು. ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ 8000 ರೂಪಾಯಿ ಬಹುಮಾನ ಘೋಷಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Related news

error: Content is protected !!