Saturday, May 4, 2024
spot_imgspot_img
spot_imgspot_img

ಮಂಗಳೂರು: ಖಾಸಗಿ ಬಸ್‌ ನೌಕರರಿಗೆ ಕೋವಿಡ್‌ ವಿಶೇಷ ಪ್ಯಾಕೇಜ್‌ನಲ್ಲಿ ಪರಿಹಾರ ನೀಡಿ!

- Advertisement -G L Acharya panikkar
- Advertisement -

ಮಂಗಳೂರು: ಕೋವಿಡ್‌ ವಿಶೇಷ ಪ್ಯಾಕೇಜ್‌ನಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರು ಖಾಸಗಿ ಬಸ್‌ ಚಾಲಕ ಮತ್ತು ನಿರ್ವಾಹಕರನ್ನು ಕಡೆಗಣಿಸಿರುವುದು ಅನ್ಯಾಯವಾಗಿದೆ. ಬಸ್‌ ಮಾಲೀಕರು ಸಂಕಷ್ಟದಲ್ಲಿದ್ದು, ಖಾಸಗಿ ಬಸ್‌ನಲ್ಲಿ ಕೆಲಸ ಮಾಡುವವರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಮುಂದಾಗಿಲ್ಲ ಎಂದು ರಾಜ್ಯ ಖಾಸಗಿ ಬಸ್ ಮಾಲೀಕರ ಒಕ್ಕೂಟದ ಅಧ್ಯಕ್ಷ ಕೆ.ರಾಜವರ್ಮ ಬಲ್ಲಾಳ ತಿಳಿಸಿದ್ದಾರೆ.

ಆಟೋ ಚಾಲಕರಿಗೆ ಪ್ಯಾಕೇಜ್‌ ಘೋಷಣೆ ಮಾಡಲಾಗಿದೆ. ಬಸ್‌ ಸ್ಥಗಿತವಾಗಿದ್ದ ವೇಳೆ ಕರ್ತವ್ಯ ನಿರ್ವಹಿಸಿದ ಖಾಸಗಿ ಬಸ್‌ ಚಾಲಕರಿಗೆ ಹಾಗೂ ನಿರ್ವಾಹಕರಿಗೆ ಯಾವುದೇ ರೀತಿಯ ಪರಿಹಾರ ನೀಡಿಲ್ಲ. ಪ್ಯಾಕೇಜ್‌ನಲ್ಲಿ ಖಾಸಗಿ ಬಸ್‌ ಸಿಬ್ಬಂದಿಗೆ ಪರಿಹಾರ ನೀಡಬೇಕು. ಖಾಸಗಿ ಬಸ್‌ ಮಾಲೀಕರು ಪ್ರತಿ ವರ್ಷ ಸರ್ಕಾರಕ್ಕೆ ಪ್ರತಿ ಬಸ್‌ಗೆ ₹2 ಲಕ್ಷದಷ್ಟು ತೆರಿಗೆ ಪಾವತಿಸುತ್ತಿದ್ದು, ಈ ಬಗ್ಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರಿಗೂ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!