Monday, May 13, 2024
spot_imgspot_img
spot_imgspot_img

ಮಂಗಳೂರು: ನಿಷೇಧಿತ ಡ್ರಗ್ ಮಾರಾಟ; ಕೇರಳದ ಇಬ್ಬರು ಆರೋಪಿ ಬಂಧನ..!

- Advertisement -G L Acharya panikkar
- Advertisement -

ಮಂಗಳೂರು: ನಿಷೇಧಿತ ಡ್ರಗ್ ಎಂಡಿಎಂಎ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬಂಧಿತರನ್ನು ಮುಸ್ತಫಾ(37) ಶಂಶುದ್ದೀನ್ ಎ(38) ಎಂದು ಗುರುತಿಸಲಾಗಿದೆ.

ಆರೋಪಿಗಳು ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಕೆ ಸಿ ರೋಡ್ ನ ರಾಷ್ಟ್ರೀಯ ಹೆದ್ದಾರಿ 66 ರ ಬಳಿಯಲ್ಲಿ ಮಾದಕವಸ್ತು ಎಂಡಿಎಂಎ ಅನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದು ಬಂದ ಖಚಿತ ಮಾಹಿತಿಯ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
ಬಂಧಿತ ಆರೋಪಿಗಳಿಂದ 75 ಸಾವಿರ ರೂ ಮೌಲ್ಯದ 15 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ.

- Advertisement -

Related news

error: Content is protected !!