Wednesday, July 2, 2025
spot_imgspot_img
spot_imgspot_img

ಮಂಗಳೂರು: ಪಬ್ ಮೇಲೆ ಸಿಸಿಬಿ ಪೊಲೀಸರ ದಾಳಿ

- Advertisement -
- Advertisement -

ಮಂಗಳೂರು: ನಗರದ ಎಂಜಿ ರಸ್ತೆಯಲ್ಲಿರುವ ಪಬ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಸಿಸಿಬಿ ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಬರ್ಕೆ ಠಾಣೆ ಇನ್‌ಸ್ಪೆಕ್ಟರ್ ಜ್ಯೋತಿರ್ಲಿಂಗ ನೇತೃತ್ವದಲ್ಲಿ ದಾಳಿ ನಡೆದಿದೆ.

ನಿಗದಿತ ಅವಧಿಗಿಂತ ಹೆಚ್ಚು ಸಮಯ ತೆರೆಯಲಾಗುತ್ತಿತ್ತು. ಜೋರಾದ ಧ್ವನಿವರ್ಧಕಗಳನ್ನು ಬಳಸಿ ಕಿರಿಕಿರಿ ಉಂಟು ಮಾಡಲಾಗುತ್ತಿತ್ತು. ಪಬ್‌ನಿಂದ ಹೊರಬರುವವರು ಅಶ್ಲೀಲವಾಗಿ ವರ್ತಿಸುತ್ತಿದ್ದರು ಎಂಬುದಾಗಿ ಸಾರ್ವಜನಿಕರು ದೂರಿದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಇದೇ ವೇಳೆ ನಗರದ ಹಲವಾರು ಪಬ್ ಮತ್ತು ಬಾರ್ ಆಯಂಡ್ ರೆಸ್ಟೋರೆಂಟ್‌ಗಳ ಮೇಲೂ ದೂರು ಬಂದಿದ್ದು ಅವುಗಳ ಮೇಲೆ ಕೂಡ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

- Advertisement -

Related news

error: Content is protected !!