Monday, April 29, 2024
spot_imgspot_img
spot_imgspot_img

ಮಂಗಳೂರು: ಪಿಯುಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

- Advertisement -G L Acharya panikkar
- Advertisement -

ಮಂಗಳೂರು: ಪಿಯುಸಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ದಿಢೀರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಶಕ್ತಿನಗರದಲ್ಲಿ ನಡೆದಿದೆ.

ನಗರದ ಖಾಸಗಿ ಕಾಲೇಜಿನಲ್ಲಿ ಪಿಯುಸಿ ಸೈನ್ಸ್ ಓದುತ್ತಿದ್ದ ವಿದ್ಯಾರ್ಥಿ ಹರ್ಷಲ್ ಕೌಶಲ್ (17) ಮೃತಪಟ್ಟ ದುರ್ದೈವಿ. ಸಂಜೆ ಕಾಲೇಜಿನಿಂದ ಬಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ತಂದೆ, ತಾಯಿ ಕೆಲಸಕ್ಕೆ ಹೋಗಿದ್ದು ಅಜ್ಜಿ ಮಾತ್ರ ಮನೆಯಲ್ಲಿದ್ದರು. ಮಗನಿಗೆ ತಾಯಿ ಫೋನ್ ಮಾಡಿದರೂ ಸ್ವೀಕರಿಸದೇ ಇದ್ದಾಗ ಅಜ್ಜಿಗೆ ಕರೆ ಮಾಡಿ ತಿಳಿಸಿದ್ದರು. ಮೇಲಿನ ಮಹಡಿಗೆ ತೆರಳಿ ನೋಡಿದಾಗ ಹುಡುಗ ಸಾವಿಗೆ ಶರಣಾಗಿದ್ದು ತಿಳಿದುಬಂದಿದೆ. ಹೆತ್ತವರಿಗೆ ಒಬ್ಬನೇ ಮಗನಾಗಿದ್ದ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!