Thursday, July 23, 2026
spot_imgspot_img
spot_imgspot_img

ಮಂಗಳೂರು: ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್ ಗಾಂಧಿಯವರ ಪುಣ್ಯತಿಥಿ ಆಚರಣೆ

- Advertisement -
- Advertisement -

ಮಂಗಳೂರು: ಇಂದು ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿಯವರ ಪುಣ್ಯತಿಥಿಯನ್ನು ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.

ಮಾಜಿ ಶಾಸಕ ಜೆ. ಆರ್.ಲೋಬೊರವರು ರಾಜೀವ್ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪಮಾಲೆಯನ್ನು ಅರ್ಪಿಸಿ ನುಡಿ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ತಂತ್ರಜ್ಞಾನದಲ್ಲಿ ಭಾರತವನ್ನು ಜಗತ್ತಿನ ಮೊದಲಿನ ಸ್ಥಾನದಲ್ಲಿ ನಿಲ್ಲಿಸಿದ ಕೀರ್ತಿ ರಾಜೀವ್ ಗಾಂಧಿಯವರದ್ದು. ಯುವಕರಿಗೆ ಮತದಾನದ ಹಕ್ಕನ್ನು 18ನೇ ವಯಸ್ಸಿಗೆ ಇಳಿಸಿ, ಯುವ ಜನಾಂಗಕ್ಕೆ ರಾಜಕೀಯಕ್ಕೆ ಪ್ರವೇಶಿಸುವಂತೆ ಮಾಡಿದರು. ಅನೇಕ ಯೋಜನೆಗಳನ್ನು ರೂಪಿಸಿ, ದೇಶಕ್ಕೆ ಒಳ್ಳೆಯ ಆಡಳಿತವನ್ನು ನೀಡಿ, ಜನರ ಹೃದಯವನ್ನು ಗೆದ್ದಿದ್ದರು ಎಂದು ನುಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲಿಂ, ಪಕ್ಷದ ಮುಖಂಡರಾದ ಹೊನ್ನಯ್ಯ, ಟಿ.ಕೆ.ಸುಧೀರ್, ನೀರಜ್ ಪಾಲ್, ದುರ್ಗಾಪ್ರಸಾದ್, ರಮಾನಂದ ಪೂಜಾರಿ, ಆಸಿಫ್ ಜೆಪ್ಪು, ಪ್ರವೀತ್ ಕರ್ಕೇರ, ವಿದ್ಯಾ, ಉದಯ್ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.

driving
- Advertisement -

Related news

error: Content is protected !!