



ಮಂಗಳೂರು: 2021 ನವೆಂಬರ್‌ನಲ್ಲಿ ಮಂಗಳೂರು ಹೊರವಲಯದ ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷ ಬಾಲಕಿಯ ಮೇಲೆ ನಡೆದ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣದ ಮೂರು ಮಂದಿ ಆರೋಪಿಗಳಿಗೆ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ.
ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗಳನ್ನು ಜಯಸಿಂಗ್, ಮುಕೇಶ್ ಸಿಂಗ್, ಮನೀಶ್ ತಿರ್ಕಿ ಎಂದು ಗುರುತಿಸಲಾಗಿದೆ.
ಪ್ರಕರಣದ ತನಿಖೆಯನ್ನು ಅಂದಿನ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಜಾನ್ಸನ್ ಡಿಸೋಜಾರವರು ಕೈಗೊಂಡು ಆರೋಪಿಗಳ ವಿರುದ್ಧ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. ಮೃತ ಬಾಲಕಿಯ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಧೀಶರು ಆದೇಶ ಮಾಡಿದ್ದಾರೆ.
2021 ನವೆಂಬರ್ ನಲ್ಲಿ ನಡೆದಿದ್ದ ಈ ಪ್ರಕರಣ ಇಡೀ ಮಂಗಳೂರು ನಗರವನ್ನೇ ಬೆಚ್ಚಿ ಬೀಳಿಸಿದ್ದು ಮಾತ್ರವಲ್ಲದೆ ಜನರು ತಲೆತಗ್ಗಿಸುವಂತೆ ಮಾಡಿತ್ತು. ಉಳಾಯಿಬೆಟ್ಟು ಸಮೀಪದ ಪರಾರಿಯ ಎಂಬಲ್ಲಿನ ಟೈಲ್ಸ್ ಫ್ಯಾಕ್ಟರಿಯಲ್ಲಿ ಎಂಟು ವರ್ಷದ ಬಾಲಕಿಯ ಲೈಂಗಿಕ ದೌರ್ಜನ್ಯ ನಡೆಸಿ ಬಳಿಕ ಆರೋಪಿಗಳು ಬಾಲಕಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದರು.