Wednesday, April 17, 2024
spot_imgspot_img
spot_imgspot_img

ಮಂಗಳೂರು: ಲಾಕ್ ಡೌನ್ ನಲ್ಲಿ ಪಡಿತರ ಅಂಗಡಿಯಿಂದ ರೇಷನ್ ತರಲು ಅನುಮತಿ; ಶಾಸಕ ವೇದವ್ಯಾಸ್ ಕಾಮತ್

- Advertisement -G L Acharya panikkar
- Advertisement -

ಮಂಗಳೂರು: ಲಾಕ್ ಡೌನ್ ಸಂದರ್ಭದಲ್ಲಿ ಪಡಿತರ ಅಂಗಡಿಯಿಂದ ರೇಷನ್ ಪಡೆದುಕೊಳ್ಳುವವರಿಗೆ ಯಾವುದೇ ರೀತಿಯ ತೊಂದರೆ ಉಂಟಾಗುವುದಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ಕೋವಿಡ್ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಲಾಕ್ ಡೌನ್ ಸಂದರ್ಭದಲ್ಲಿ ಪಡಿತರ ಅಂಗಡಿಯಿಂದ ರೇಷನ್ ತರಲು ಯಾವುದೇ ರೀತಿಯ ಸಮಸ್ಯೆ ಇಲ್ಲ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಮಾತನಾಡಿದ್ದೇನೆ. ರೇಷನ್ ಅಂಗಡಿಗಳಲ್ಲಿ ಸಾಮಾಗ್ರಿ ಪಡೆಯುವ ಸಮಯದಲ್ಲಿ ಸ್ವಲ್ಪ ಬದಲಾವಣೆಯಾದರೂ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಿಗೆ ಸಹಕರಿಸುವಂತೆ ಸೂಚನೆ ನೀಡಲಾಗಿದ್ದು, ಸಾರ್ವಜನಿಕರು ಪಡಿತರ ಚೀಟಿ ತೋರಿಸಿ ಹೋಗಬಹುದು ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ಸಾರ್ವಜನಿಕರು ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ಲಾಕ್ ಡೌನ್ ನಿಯಮಾವಳಿಗಳನ್ನು ಪಾಲಿಸಿ, ಅನಗತ್ಯವಾಗಿ ಮನೆಯಿಂದ ಹೊರಬರದೆ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟಲು ವ್ಯವಸ್ಥೆಯ ಜೊತೆ ಕೈಜೋಡಿಸಬೇಕು ಎಂದು ಶಾಸಕ ಕಾಮತ್ ಹೇಳಿದ್ದಾರೆ.

- Advertisement -

Related news

error: Content is protected !!