Wednesday, May 15, 2024
spot_imgspot_img
spot_imgspot_img

ಮಂಗಳೂರು: ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟ; ಆರೋಪಿ ಅರೆಸ್ಟ್..!

- Advertisement -G L Acharya panikkar
- Advertisement -

ಮಂಗಳೂರು: ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತನನ್ನು ಒಂಭತ್ತು ಕೆರೆ ನಿವಾಸಿ ಅಬ್ದುಲ್ ಸವಾಜ್ ಯಾನೆ ಚವ್ವಾ (30) ಎಂದು ಗುರುತಿಸಲಾಗಿದೆ.

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಒಂಬತ್ತು ಕೆರೆ ಬಳಿ ದ್ವಿಚಕ್ರ ವಾಹನವೊಂದರಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಬಂಧಿತ ಆರೋಪಿಯಿಂದ 25 ಗ್ರಾಂ ತೂಕದ ರೂ. 1,25,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, ಹೊಂಡಾ ಅಕ್ಟಿವಾ ಸ್ಕೂಟರ್, ಒಂದು ಮೊಬೈಲ್ ಫೋನ್, 2120 ರೂ. ನಗದು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 2,17,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!