Sunday, June 29, 2025
spot_imgspot_img
spot_imgspot_img

ಮಂಗಳೂರು : ಮಾದಕ ವಸ್ತು MDMA ಮಾರಾಟ; ಮೂವರು ಕುಖ್ಯಾತ ಡ್ರಗ್ ಪೆಡ್ಲರ್ ಬಂಧನ

- Advertisement -
- Advertisement -

ಮಂಗಳೂರು: ಮಾದಕ ವಸ್ತು MDMA ಮಾರಾಟ ಮಾಡುತ್ತಿದ್ದ ಮೂವರು ಕುಖ್ಯಾತ ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿರೂರು ಎಂಬಲ್ಲಿ ಎರಡು ಕಾರಿನಲ್ಲಿ ಬಂದು ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಂಟ್ವಾಳ ಪುದು ಗ್ರಾಮ ಮೂಲದ ಸದ್ಯ ಕೃಷ್ಣಾಪುರ 7ನೇ ಬ್ಲಾಕ್ ನಲ್ಲಿ ಬಾಡಿಗೆ ಮನೆಯಲ್ಲಿರುವ ಮೊಹಮ್ಮದ್ ನಿಯಾಜ್ (28), ತಲಪಾಡಿ ಕೆ.ಸಿ.ರೋಡ್ ನಿವಾಸಿ ನಿಶಾದ್ (31) ಮತ್ತು ಪಟೇಲ್ ಕಣ್ಣೂರು ನಿವಾಸಿ ಮಹಮ್ಮದ್ ರಝೀನ್ (24) ಎಂಬ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಅವರಿಂದ ಒಟ್ಟು 180 ತೂಕದ 9 ಲಕ್ಷ ರೂ ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾರುತಿ ಸ್ವಿಫ್ಟ್ ಕಾರುಗಳು, 4 ಮೊಬೈಲ್ ಫೋನ್ ಗಳು, ಪಿಸ್ತೂಲ್-1, ಸಜೀವ ಗುಂಡು-1, ಡ್ರಾಗನ್ ಚೂರಿಗಳು-2, ಡಿಜಿಟಲ್ ತೂಕ ಮಾಪನ ಮತ್ತು ರೂ. 22,050 ನಗದು ವಶಪಡಿಸಿಕೊಳ್ಳಲಾಗಿದೆ. ಅರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.

- Advertisement -

Related news

error: Content is protected !!