Monday, May 20, 2024
spot_imgspot_img
spot_imgspot_img

ಮಂಗಳೂರು : ನಿಷೇಧಿತ ಮಾದಕ ವಸ್ತು ಮಾರಾಟ; ಆರೋಪಿ ಬಂಧನ

- Advertisement -G L Acharya panikkar
- Advertisement -

ಮಂಗಳೂರು: ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದೇರಳಕಟ್ಟೆ ನಿವಾಸಿ ಅಕ್ಷತ್ ಕುಮಾರ್ (34) ಎಂದು ಗುರುತಿಸಲಾಗಿದೆ

ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ದೇರಳಕಟ್ಟೆಯ ಬಗಂಬಿಲದ ಮನೆಯೊಂದರ ಬಳಿಯಿರುವ ಶೆಡ್ ನಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿಯವರಾದ ಪಿ ಎ ಹೆಗಡೆ ರವರ ನೇತೃತ್ವದ ಸಿಸಿಬಿ ಪೊಲೀಸರು ಎಂಡಿಎಂಎ ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಆತನಿಂದ ಒಟ್ಟು 72 ಗ್ರಾಂ ತೂಕದ ರೂ. 3,66,000/- ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್-1, ನಗದು ರೂ. 20,880/-, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ನಿಷೇದಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್ ಗಳು, ನಗದು ಇವುಗಳ ಒಟ್ಟು ಮೌಲ್ಯ ರೂ. 4,17,380/-ಆಗಬಹುದು. ಆರೋಪಿಯ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

- Advertisement -

Related news

error: Content is protected !!