Sunday, June 14, 2026
spot_imgspot_img
spot_imgspot_img

ಮಂಗಳೂರು; ನಿಷೇಧಿತ ಮಾದಕ ವಸ್ತು ಎಂ‌ಡಿಎಂಎ ಮಾರಾಟ; ಇಬ್ಬರು ಆರೋಪಿಗಳ ಬಂಧನ

- Advertisement -
- Advertisement -

ಮಾದಕ ವಸ್ತು ಸಹಿತ ಸೊತ್ತುಗಳು ವಶಕ್ಕೆ

ಮಂಗಳೂರು ನಗರದ ಉಳ್ಳಾಲ್ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್‌‌ಲ್ಲಿ ನಿಷೇಧಿತ ಮಾದಕ ವಸ್ತು MDMA ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ, ವಸ್ತುಗಳನ್ನು ವಶಪಡಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂದು ಗುರುತಿಸಲಾಗಿದೆ.

ಸೆ.1ರಂದು ಮಂಗಳೂರು ನಗರದ ಉಳ್ಳಾಲ್ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್‌‌ಲ್ಲಿ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದರು.

ಆರೋಪಿಗಳಿಂದ 15 ಗ್ರಾಂ MDMA, ಡಿಯೋ ಬೈಕ್, ಎರಡು ಮೊಬೈಲ್ ಫೋನ್, ಪೋರ್ಟಬಲ್ ಡಿಜಿಟಲ್ ತೂಕದ ಯಂತ್ರ, ಇತ್ಯಾದಿಗಳ ಅಂದಾಜು ಮೌಲ್ಯ ₹ 95500/-ರೂ. ಇವುಗಳನ್ನು ಪಂಚನಾಮೆ ಮೂಲಕ ಅಮಾನತ್ತು ಪಡಿಸಿಕೊಂಡು, ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣಾ Cr. No. 155/25 U/S NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಕಾರ್ಯಾಚರಣೆಯು ಎಸಿಪಿ ರವರಾದ ವಿಜಯಕ್ರಾಂತಿ ಕೆ ಎಸ್ ಪಿ ಎಸ್ ರವರ ಮಾರ್ಗದರ್ಶನ ಹಾಗೂ ನಿರ್ದೇಶನದಂತೆ ಉಳ್ಳಾಲ ಪೊಲೀಸ್ ಠಾಣಾ ಸಿಬ್ಬಂದಿಗಳಿಂದ ಯಶಸ್ವಿಯಾಗಿ ಕೈಗೊಳ್ಳಲಾಗಿದೆ.

- Advertisement -

Related news

error: Content is protected !!