Sunday, June 14, 2026
spot_imgspot_img
spot_imgspot_img

ಮಂಗಳೂರು: ಡಿವೈಡರ್‌ಗೆ ಡಿಕ್ಕಿ ಹೊಡೆದ ಸ್ಕೂಟರ್; ಸವಾರ ಮೃತ್ಯು

- Advertisement -
- Advertisement -

ಮಂಗಳೂರು: ನಗರದ ಯೆಯ್ಯಾಡಿ ಶರ್ಬತ್‌ ಕಟ್ಟೆ ಬಳಿ ನಾಯಿಯೊಂದು ರಸ್ತೆಯಲ್ಲಿ ಅಡ್ಡದಾಟಿದ ಪರಿಣಾಮ ಸ್ಕೂಟರ್ ಸವಾರ ಆಯತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮರೋಳಿ ಬಜ್ಜೋಡಿ ನಿವಾಸಿ ನರಸಿಂಹ ಗಟ್ಟಿ (67) ಮೃತರು ಎಂದು ತಿಳಿದು ಬಂದಿದೆ. ಶುಕ್ರವಾರ ಬೆಳಗ್ಗೆ ಮನೆಯಿಂದ ಯೆಯ್ಯಾಡಿ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದ ಸಂದರ್ಭ ನಾಯಿಯೊಂದು ಅಡ್ಡದಾಟಿದೆ. ಈ ವೇಳೆ ನಿಯಂತ್ರಣ ತಪ್ಪಿದ ಸ್ಕೂಟರ್ ನಾಯಿಗೆ ಢಿಕ್ಕಿ ಹೊಡೆದಿದ್ದು, ಕೆಳಗೆ ಬೀಳುವಾಗ ಡಿವೈಡರ್ ತಲೆಗೆ ಬಡಿದು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಈ ವೇಳೆ ದಾರಿಮಧ್ಯೆ ಮೃತಪಟ್ಟಿದ್ದಾರೆ.

ಸಂಸ್ಥೆಯೊಂದರ ಡೀಲರ್ ಶಿಪ್ ಪಡೆದುಕೊಂಡು ವ್ಯವಹಾರ ನಿರ್ವಹಿಸುತ್ತಿದ್ದ ನರಸಿಂಹ ಗಟ್ಟಿ ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

- Advertisement -

Related news

error: Content is protected !!