Friday, April 26, 2024
spot_imgspot_img
spot_imgspot_img

ಮಂಗಳೂರು: ಟೆಂಟ್ ಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ಗುಡಿಸಲಿಗೆ ದ.ಕ ಜಿಲ್ಲಾಧಿಕಾರಿ ಭೇಟಿ!

- Advertisement -G L Acharya panikkar
- Advertisement -

ಮಂಗಳೂರು: ದಕ್ಷಿಣ ಕನ್ನಡದ ಮಂಗಳೂರಿನ ಸಮುದ್ರತೀರದ ಹೊಯಿಗೆ ಬಜಾರ್ ನ ನೇತ್ರಾವತಿ ನದಿ ತೀರದಲ್ಲಿ ಟೆಂಟ್ ಗಳಲ್ಲಿ ಬದುಕುತ್ತಿರುವ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳು ಇತ್ತೀಚೆಗೆ ತೌಕ್ತೆ ಚಂಡಮಾರುತದ ಪರಿಣಾಮದಿಂದಾಗಿ ಟೆಂಟ್ ಗಳು ಹಾರಿ ಹೋಗಿ ಹಲವು ಸಮಸ್ಯೆಗಳನ್ನು ಅನುಭವಿಸಿದ್ದರು.

ಮಾತ್ರವಲ್ಲದೆ ಕೋರೊನಾ ರೋಗದ ಈ ಕಾಲಘಟ್ಟದಲ್ಲಿ ಉಂಟಾದ ಸಮಸ್ಯೆ ಮತ್ತು ಲಾಕ್ಡೌನ್ ನಿಂದಾಗಿ ಒಂದ್ಹೊತ್ತಿನ ಊಟಕ್ಕೂ ಪಡಿತರ ಇಲ್ಲದೆ ಪರದಾಡುತ್ತಿದ್ದ ಈ ಸಮುದಾಯಕ್ಕೆ ಆಹಾರ ಸಾಮಾಗ್ರಿ ಸಹಿತ ಆರ್ಥಿಕ ಪರಿಹಾರ ನೀಡಬೇಕೆಂದು ಜಿಲ್ಲಾಡಳಿತವನ್ನು ಒತ್ತಾಯಿಸಲಾಗಿತ್ತು. ಈ ಬಗ್ಗೆ ಗಮನಹರಿಸಿದ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಹೊಯಿಗೆ ಬಜಾರಿನ ಶಿಳ್ಳೆಕ್ಯಾತ ಅಲೆಮಾರಿ ಜನಾಂಗದವರು ವಾಸಿಸುತ್ತಿರುವ ಕ್ಯಾಂಪ್ ಗೆ ಭೇಟಿ ನೀಡಿ ಅವರ ಸಮಸ್ಯೆಗಳನ್ನು ಆಲಿಸಿದರು.

ಶಿಳ್ಳೆಕ್ಯಾತ ಕುಟುಂಬಗಳಿಗೆ ಬೇಕಾಗಿರುವ ಪಡಿತರ ಆಹಾರ ಸಾಮಾಗ್ರಿಗಳನ್ನು ಒದಗಿಸಿಕೊಡಲು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದರು. ಅದೇ ರೀತಿ ಸೊಳ್ಳೆ ಪರದೆಗಳನ್ನು ವಿತರಿಸಲು ಹಾಗೂ ಎಲ್ಲರ ಆರೋಗ್ಯ ತಪಾಸಣೆ ನಡೆಸಲು ಸೂಚಿಸಿದರು. ವಸತಿ, ವಿದ್ಯುತ್, ದಾರಿ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಮುಂದಿನ ದಿನ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕೆ. ರವೀಂದ್ರ ಶೆಟ್ಟಿ , ಕರಾವಳಿ ವೃತ್ತಿನಿರತ ಅಲೆಮಾರಿ ಶಿಳ್ಳೆಕ್ಯಾತ ಹಕ್ಕುಗಳ ಸಮಿತಿಯ ಗೌರವಾಧ್ಯಕ್ಷರು ಸಂತೋಷ್ ಬಜಾಲ್ , ಅಲೆಮಾರಿ ನಿಗಮದ ಅಧಿಕಾರಿ ಸೋಮಪ್ಪ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!