Tuesday, June 23, 2026
spot_imgspot_img
spot_imgspot_img

ಮಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷಾ‌ ಕೇಂದ್ರದ ಶಾಲೆಯ ಲ್ಯಾಬ್ ನಲ್ಲಿ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅವಘಡ!

- Advertisement -
- Advertisement -

ಮಂಗಳೂರು: ಖಾಸಗಿ ಶಾಲೆಯೊಂದರ ಲ್ಯಾಬ್ ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಘಟನೆ ಬಬ್ಬುಕಟ್ಟೆಯಲ್ಲಿ ಇಂದು ನಡೆದಿದೆ.

ಬಬ್ಬುಕಟ್ಟೆಯ ಹೀರಾ ಪದವಿಪೂರ್ವ ಕಾಲೇಜಿನ ಪ್ರಯೋಗಾಲಯದಲ್ಲಿ ಸುಮಾರು 10.40 ಕ್ಕೆ ಬೆಂಕಿ‌ ಕಾಣಿಸಿಕೊಂಡಿತ್ತು. ಈ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ‌ ಕೇಂದ್ರವಿದ್ದು, ಅಲ್ಲಿ ಸುಮಾರು 200 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದರು. ತಕ್ಷಣವೇ ಅವರನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗಿದೆ. ಘಟನಾ ಸ್ಥಳಕ್ಕೆ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರಬಹುದೆಂದು ಶಂಕಿಸಲಾಗಿದೆ. ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆ ಆಗಿಲ್ಲ, ಪರೀಕ್ಷೆ ಸುಸೂತ್ರವಾಗಿ ನಡೆದಿದೆ ಎಂದು‌ ತಿಳಿದುಬಂದಿದೆ.

driving
- Advertisement -

Related news

error: Content is protected !!