- Advertisement -
- Advertisement -


ಮಂಗಳೂರು: ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಜೆಪ್ಪು ಕುಡುಪಾಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಶರಣಾದ ಬಾಲಕ SSLC ವಿದ್ಯಾರ್ಥಿ ಅನಿಶ್ ಪಿ. ಪಾಯಲ್ (16) ಎಂದು ತಿಳಿದುಬಂದಿದೆ.
ಬಾಲಕನ ತಂದೆ ಪ್ರಶಾಂತ್ ಪಾಯಲ್ ಮೂರು ವರ್ಷಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದು, ಆ ಬಳಿಕ ಅನಿಶ್ ಮಾನಸಿಕವಾಗಿ ನೊಂದುಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


- Advertisement -








