Friday, June 19, 2026
spot_imgspot_img
spot_imgspot_img

ಮಂಗಳೂರು: ರಾಜ್ಯ INTUC ಪ್ರಧಾನ ಕಾರ್ಯದರ್ಶಿ ಮಾಜಿ ಮೇಯರ್ ಕಾಂಗ್ರೇಸ್‌ ನಾಯಕಿ ಕವಿತಾ ಸನಿಲ್ ಬಿಜೆಪಿ ಗೆ ಸೇರ್ಪಡೆ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೇಸ್‌ ನಾಯಕಿ ಕವಿತಾ ಸನಿಲ್‌ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್, ಕಾಂಗ್ರೆಸ್ ನಾಯಕಿ, ರಾಜ್ಯ ಐಎನ್‌‌ಟಿಯುಸಿ ಪ್ರಧಾನ ಕಾರ್ಯದರ್ಶಿ ಕವಿತಾ ಸನಿಲ್‌ ಕಾಂಗ್ರೇಸ್‌ ಪಕ್ಷದ ನಾಯಕಿಯಾಗಿ ಪಕ್ಷದಲ್ಲಿ ಗುರುತಿಸಿಕೊಂಡವರು. ಇದೀಗ ಕಾಂಗ್ರೇಸ್‌ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದು, ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಕೆರಳಿಸಿದೆ.

ಬಿಜೆಪಿ ವತಿಯಿಂದ ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಹಿತ ಹಲವು ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು.

- Advertisement -

Related news

error: Content is protected !!