- Advertisement -
- Advertisement -
ಮಂಗಳೂರು: ಟ್ಯಾಂಕರ್ ಹರಿದು ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ನಂತೂರು ಪದವು ಎಂಬಲ್ಲಿ ಸಂಭವಿಸಿದೆ.
ಮೃತಪಟ್ಟ ವ್ಯಕ್ತಿ ಶಿವಾನಂದ ಮೃತಪಟ್ಟ ಸ್ಕೂಟರ್ ಸವಾರ ಎಂದು ತಿಳಿದುಬಂದಿದೆ.
ಮೃತ ಶಿವಾನಂದ ಅವರು ಸ್ಕೂಟರ್ ನಲ್ಲಿ ಕೆಪಿಟಿಯಿಂದ ನಂತೂರು ಜಂಕ್ಷನ್ ಕಡೆಗೆ ಹೋಗುತ್ತಿದ್ದರು. ಈ ವೇಳೆ ನಂತೂರಿನಿಂದ ಕೆಪಿಟಿ ಕಡೆಗೆ ನಿರ್ಲಕ್ಷ್ಯತನದಿಂದ ಟ್ಯಾಂಕರನ್ನು ಚಲಾಯಿಸಿಕೊಂಡು ಬಂದ ಚಾಲಕ ಸುನೀತ್ ಕೆ, ಸ್ಕೂಟರ್ ನ ಬಲಭಾಗಕ್ಕೆ ಢಿಕ್ಕಿ ಹೊಡೆದಿದ್ದಾನೆ.
ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಕೂಟರ್ ಸಮೇತ ರಾಷ್ಟ್ರೀಯ ಹೆದ್ದಾರಿಗೆ ಎಸೆಯಲ್ಪಟ್ಟಿದ್ದಾನೆ. ಬಳಿಕ ಢಿಕ್ಕಿಪಡಿಸಿದ ಟ್ಯಾಂಕರ್ ನ ಎಡ ಹಿಂಭಾಗದ ಟೈಯರ್ ಸ್ಕೂಟರ್ ಸವಾರನ ತಲೆಯ ಮೇಲೆ ಹರಿದು ಹೋಗಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿರುತ್ತಾನೆ. ಇನ್ನು ಮೃತ ದೇಹವನ್ನು ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
- Advertisement -