Sunday, June 28, 2026
spot_imgspot_img
spot_imgspot_img

ಮಂಗಳೂರು: ಭಜನಾ ಮಂದಿರಕ್ಕೆ ನುಗ್ಗಿ ಕಳ್ಳತನ; ಸಿಸಿಟಿವಿಯಲ್ಲಿ ಸೆರೆಯಾಯ್ತು ಖದೀಮರ ಕೃತ್ಯ

- Advertisement -
- Advertisement -

ಮಂಗಳೂರು: ನಗರದ ನೀರುಮಾರ್ಗದ ಜಂಕ್ಷನ್ ಸಮೀಪದಲ್ಲಿರುವ ಶ್ರೀ ಸುಬ್ರಹ್ಮಣ್ಯ ಭಜನಾ ಮಂದಿರಕ್ಕೆ ನುಗ್ಗಿದ ಇಬ್ಬರು ಖದೀಮರು ಕಾಣಿಕೆ ಡಬ್ಬಿ ಕಳವುಗೈದಿರುವ ಘಟನೆ ಬುಧವಾರ ನಸುಕಿನ ವೇಳೆ ನಡೆದಿದ್ದು, ಕಳ್ಳರ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಭಜನಾ ಮಂದಿರದ ಮುಂಭಾಗಕ್ಕೆ ನಸುಕಿನ ವೇಳೆ ಕಳ್ಳರು ಮುಂಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿದ್ದಾರೆ‌. ಬಳಿಕ ಉತ್ತರದ ಬಾಗಿಲು ತೆರೆದು ಪ್ರಧಾನ ಗುಡಿಯ ಮುಂಭಾಗದಲ್ಲಿರುವ ಕಾಣಿಕೆ ಡಬ್ಬಿಯನ್ನು ಕದ್ದೊಯ್ದಿದ್ದಾರೆ. ಅಲ್ಲದೆ ಕಾಣಿಕೆ ಡಬ್ಬಿಯಲ್ಲಿದ್ದ ಹಣವನ್ನು ದೋಚಿದ್ದಾನೆ.

ಆರೋಪಿಗಳು ಆಗಮಿಸುವ ದೃಶ್ಯಗಳು ಹಾಗೂ ಕಳವು ನಡೆಸಿರುವ ವೀಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುನ್ನಡೆಸಿದ್ದಾರೆ.

- Advertisement -

Related news

error: Content is protected !!