Sunday, May 19, 2024
spot_imgspot_img
spot_imgspot_img

ಮಂಗಳೂರು: ಡಯಟ್ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ವ್ಯಕ್ತಿ ಅಂದರ್; ಈತನಿಗಿತ್ತು ಪ್ಯಾರನಾಯ್ಡ್ ಸ್ಕಿಜೋಫ್ರೀನಿಯಾ ಎನ್ನುವ ಮಾನಸಿಕ ಖಾಯಿಲೆ

- Advertisement -G L Acharya panikkar
- Advertisement -

ಮಂಗಳೂರು: ನಗರದ ಜಿಲ್ಲಾ ಶಿಕ್ಷಕ ಮತ್ತು ತರಬೇತಿ ಸಂಸ್ಥೆ ಮೂವರು ಮಹಿಳಾ ಸಿಬ್ಬಂದಿ ಮೇಲೆ ತಲವಾರಿನಿಂದ ದಾಳಿ ನಡೆಸಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಿದ್ದಾರೆ. ಈ ವೇಳೆ ಈತನೊಬ್ಬ ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿದ್ದು 2012 ರಿಂದ 15ರ ನಡುವೆ ಹಲವು ಬಾರಿ ಬಾಳಿಗಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ. ಪ್ಯಾರನಾಯ್ಡ್ ಸ್ಕಿಜೋಫ್ರೀನಿಯಾ ಎನ್ನುವ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರಿಂದ ಆತನಿಗೆ ವೈದ್ಯರು ಚಿಕಿತ್ಸೆ ನೀಡಿದ್ದರು ಎಂಬ ಮಾಹಿತಿ ಬಹಿರಂಗವಾಗಿದೆ.

ಬ0ಧಿತನನ್ನು ಕುಂದಾಪುರ ನಿವಾಸಿ ನವೀನ್ ಎಂದು ಗುರುತಿಸಲಾಗಿದ್ದು, ಈತ ಕುಂದಾಪುರ ನ್ಯಾಯಾಲಯದಲ್ಲಿ ಜವಾನನಾಗಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ. ಡಯಟ್ ಸಂಸ್ಥೆಗೆ ನಿನ್ನೆ ಮಧ್ಯಾಹ್ನ 12.45ರ ಸುಮಾರಿಗೆ ಬಂದ ಆರೋಪಿ ಟೀಚರ್ ಒಬ್ಬರಿಗೆ ಗಿಪ್ಟ್ ನೀಡಲು ಇದೆ ಅವರು ಎಲ್ಲಿದ್ದಾರೆ ಎಂದಾಗ ಅಲ್ಲಿನ ಸಿಬ್ಬಂದಿ ಇಲ್ಲಿಲ್ಲವೆಂದಿದ್ದಾರೆ.

ಇದರಿಂದ ಕೋಪಗೊಂಡ ನವೀನ ಶಿಕ್ಷಕೇತರ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದ ಕೊಠಡಿಯೊಳಗೆ ನುಗ್ಗಿ ಕರ್ತವ್ಯ ನಿರತರಾಗಿದ್ದ ಸಿಬ್ಬಂದಿ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾನೆ. ಆ ಸಂದರ್ಭ ಅಲ್ಲಿದ್ದ ಡಿ ದರ್ಜೆಯ ಮಹಿಳಾ ಸಿಬ್ಬಂದಿ ತಡೆಯಲು ಆಗಮಿಸಿದ್ದು, ಆಕೆಯ ಮೇಲೂ ಹಲ್ಲೆ ನಡೆದಿದೆ. ಹಲ್ಲೆಗೊಳಗಾದ ಮೂವರಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯವಾಗಿದ್ದು, ಮೂವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಇದೇ ವೇಳೆ ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದವರ ಯೋಗಕ್ಷೇಮ ವಿಚಾರಿಸಿದ್ದಾರೆ. ಬರ್ಕೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!