- Advertisement -
- Advertisement -




ಮಂಗಳೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಂಗಳೂರು ನಗರದ ಕುಂಟಿಕಾನ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬಳಿ ನಡೆದಿದೆ.
ಕೂಳೂರು ಕಡೆಯಿಂದ ಕೆಪಿಟಿ ಕಡೆಗೆ ಬರುತ್ತಿದ್ದ ಕಾರು ಕುಂಟಿಕಾನ ಜಂಕ್ಷನ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ಡಾಗಿ ರಸ್ತೆ ವಿಭಜಕದ ಮಧ್ಯೆ ಬಿದ್ದಿದೆ.
ಇದರಿಂದ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಮತ್ತು ಆತನ ಪುತ್ರಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಶುಕ್ರವಾರ ಮುಂಜಾನೆ ಈ ಘಟನೆ ನಡೆದಿದೆ.
- Advertisement -