Thursday, May 16, 2024
spot_imgspot_img
spot_imgspot_img

ಮಂಗಳೂರು: ಗಡಿಪಾರಾಗಿದ್ದ ರೌಡಿಶೀಟರ್ ಚುನಾವಣಾ ಪ್ರಚಾರ ಆರೋಪ; ಮತ್ತೆ ಗಡಿಪಾರು..!

- Advertisement -G L Acharya panikkar
- Advertisement -

ಬೆಳ್ತಂಗಡಿ: ಚುನಾವಣೆ ಹಿನ್ನಲೆ ಪೊಲೀಸ್ ಇಲಾಖೆ ಗಡಿಪಾರು ಮಾಡಿದ್ದ ರೌಡಿಶೀಟರ್ ಚುನಾವಣಾ ಪ್ರಚಾರ ಮಾಡಿದ್ದಾನೆ ಎಂದು ಸಾರ್ವಜನಿಕರು ಆರೋಪಿಸಿದ್ದು, ಇದೀಗ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರೌಡಿಶೀಟರ್ ಆಗಿರುವ ಕೋಡಿಕೆರೆ ಲೋಕೇಶ್ ಯಾನೆ ಲೋಕು ಎಂಬಾತನನ್ನು ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಶಿವಮೊಗ್ಗ ಜಿಲ್ಲೆಗೆ ಗಡಿಪಾರು ಮಾಡಿದ್ದರು.

ಲೋಕೇಶ್ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾನೆ ಎಂದು ಸಾರ್ವಜನಿಕರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಅವರಿಗೆ ದೂರು ನೀಡಿದ್ದರು. ಅವರು ಮಂಗಳೂರು ನಗರ ಪೊಲೀಸ್ ಕಮಿಷನರ್‌ಗೆ ಈ ವಿಷಯ ತಿಳಿಸಿದ್ದರು’ ಎಂದು ಮೂಲಗಳು ತಿಳಿಸಿವೆ.

ಶಿವಮೊಗ್ಗಕ್ಕೆ ಗಡಿಪಾರು ಮಾಡಲಾಗಿದ್ದ ಸುರತ್ಕಲ್ ಠಾಣಾ ವ್ಯಾಪ್ತಿಯ ಕೋಡಿಕೆರೆ ನಿವಾಸಿ ಲೋಕೇಶ್‌ ಆದೇಶ ಮೀರಿ ಜಿಲ್ಲೆಯೊಳಗೆ ಪ್ರವೇಶಿಸಿದ್ದ. ಆದೇಶ ಉಲ್ಲಂಘಿಸಿದ ಕಾರಣ ಮಂಗಳೂರು ಪೊಲೀಸರು ಈತನನ್ನು ಗುರುವಾರ ರಾತ್ರಿ ಬೆಳ್ತಂಗಡಿಯಲ್ಲಿ ವಶಕ್ಕೆ ಪಡೆದಿದ್ದು, ಬೇರೆ ಜಿಲ್ಲೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಬಿಜೆಪಿ ಕಾರ್ಯಕರ್ತರ ಜತೆ ರೌಡಿಶೀಟರ್ ಲೋಕೇಶ್ ಇರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಪೊಲೀಸ್‌ ಅಧಿಕಾರಿಗಳನ್ನು ಪ್ರಶ್ನಿಸಿದಾಗ, ‘ಲೋಕೇಶ್ ಪ್ರಚಾರಕ್ಕೆ ಬಂದಿದ್ದಾನೆಂಬ ದೂರು ಬಂದಿತ್ತು. ಆದರೆ, ಸ್ಥಳಕ್ಕೆ ಭೇಟಿ ನೀಡಿದಾಗ ಆತ ಅಲ್ಲಿ ಇರಲಿಲ್ಲ. ಸುರತ್ಕಲ್‌ನಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ’ ಎಂದರು.

- Advertisement -

Related news

error: Content is protected !!