Saturday, June 20, 2026
spot_imgspot_img
spot_imgspot_img

ಮಂಗಳೂರು: ಕಳ್ಳತನ ಪ್ರಕರಣ; ಆರೋಪಿ ಅರೆಸ್ಟ್..!

- Advertisement -
- Advertisement -

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಮೂಲತಃ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆರೂರಿನ ಪ್ರಸಕ್ತ ಬಂಟ್ವಾಳ ತಾಲೂಕಿನ ರಾಯಿ ಗ್ರಾಮದ ದೀಕ್ಷಿತ್ (27) ಎಂದು ಗುರುತಿಸಲಾಗಿದೆ.

ಆರೋಪಿಯಿಂದ ಕಳವುಗೈದ 50,000 ರೂ. ಮೌಲ್ಯದ ಬಂಗಾರದ ತಾಳಿ ಸರ ಮತ್ತು ಮೊಬೈಲ್ ಫೋನ್ ವಶಪಡಿಸಿ ಕೊಂಡಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಯ ವಿರುದ್ಧ ಈ ಹಿಂದೆ ಬ್ರಹ್ಮಾವರ ಮತ್ತು ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದೆ. ಕಾರ್ಯಚರಣೆಯಲ್ಲಿ ಮೂಡುಬಿದಿರೆ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಪಿಜಿ ಮತ್ತು ಎಸ್ಸೆಗಳಾದ ದಿವಾಕರ್ ರೈ, ಸಿದ್ದಪ್ಪ ನರನೂರು ಹಾಗೂ ಅಪರಾಧ ವಿಭಾಗದ ಸಿಬ್ಬಂದಿಗಳಾದ ಮುಹಮ್ಮದ್ ಇಟ್ಬಾಲ್, ನಾಗರಾಜ್ ಲಮಾಣಿ, ಅಕೀಲ್ ಅಹ್ಮದ್, ಚಂದ್ರಹಾಸ ರೈ ವೆಂಕಟೇಶ್ ಪಾಲ್ಗೊಂಡಿದ್ದರು.

- Advertisement -

Related news

error: Content is protected !!