- Advertisement -
- Advertisement -
ಮಂಗಳೂರು : ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಆರು ಆಸ್ಪತ್ರೆಗಳಿರುವ ಪ್ರದೇಶದಲ್ಲಿ ಹಾರ್ನ್ ಬಳಕೆಯನ್ನು ನಿಷೇಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರು ಅಧಿಸೂಚನೆ ಹೊರಡಿಸಿದ್ದಾರೆ.
ಲೇಡಿಗೋಷನ್ ಆಸ್ಪತ್ರೆ, ಹಂಪನಕಟ್ಟೆ ಜಂಕ್ಷನ್, ಡಾ. ಅಂಬೇಡ್ಕರ್ ವೃತ್ತ, ಕೆ.ಎಂ.ಸಿ ಆಸ್ಪತ್ರೆ ಅತ್ತಾವರ, ಕೆ.ಎಸ್ ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಮತ್ತು ಯೇನಪೋಯ ಆಸ್ಪತ್ರೆ ದೇರಳಕಟ್ಟೆ ಈ 6 ಪ್ರದೇಶಗಳನ್ನು“ಹಾರ್ನ್ ನಿಷೇಧಿತ ಪ್ರದೇಶ” ಎಂದು ಘೋಷಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಅವರು ಅಧಿಸೂಚನೆ ಹೊರಡಿಸಿದ್ದಾರೆ.
- Advertisement -