Saturday, June 28, 2025
spot_imgspot_img
spot_imgspot_img

ಮಂಗಳೂರು: ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವು..!

- Advertisement -
- Advertisement -

ಮಂಗಳೂರು: ಖಾಸಗಿ ಬೀಚ್ ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನಪ್ಪಿದ ಘಟನೆ ಮಂಗಳೂರು ಹೊರವಲಯದ ಸೋಮೇಶ್ವರ ಉಚ್ಚಿಲದ ವಾಝ್ಕೊ ಬೀಚ್ ರೆಸಾರ್ಟ್ ಈಜುಕೊಳದಲ್ಲಿ ನಡೆದಿದೆ.

ಮೃತಪಟ್ಟ ಯುವತಿಯರನ್ನು ಮೈಸೂರು ಕುರುಬಾರಹಳ್ಳಿ ನಾಲ್ಕನೇ ಕ್ರಾಸ್ ನಿವಾಸಿ ನಿಶಿತ ಎಂ.ಡಿ. (21), ಮೈಸೂರು ರಾಮಾನುಜ ರಸ್ತೆ, ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ ಎಸ್ (20), ಮೈಸೂರು ವಿಜಯ ನಗರ ದೇವರಾಜ ಮೊಹಲ್ಲ ನಿವಾಸಿ ಕೀರ್ತನ ಎನ್(21) ಎಂದು ಗುರುತಿಸಲಾಗಿದೆ.

ಮೂವರು ಗೆಳೆತಿಯರು ನಿನ್ನೆ ಬೆಳಗ್ಗೆ ಬೀಚ್ ರೆಸಾರ್ಟ್ ಗೆ ಆಗಮಿಸಿ ಕೊಠಡಿ ಪಡೆದಿದ್ದರು. ಇಂದು ಬೆಳಿಗ್ಗೆ 8.30ರ ಸುಮಾರಿಗೆ ಸ್ವಿಮ್ಮಿಂಗ್ ಫೂಲ್ ನಲ್ಲಿ ಈಜಲು ತೆರಳಿದ್ದರು, ಮೂವರೇ ಪೂಲ್ ನಲ್ಲಿ ಆಟವಾಡುತ್ತಿದ್ದ ವೇಳೆ ನಡೆದ ಘಟನೆ. ಸ್ವಿಮ್ಮಿಂಗ್ ಫೂಲ್ ನಲ್ಲಿ ಒಂದು ಬದಿ ಆರು ಅಡಿಯಷ್ಟು ಆಳವಿತ್ತು, ಈ ವೇಳೆ ಆಯಾತಪ್ಪಿ ಓರ್ವ ಯುವತಿ ಮುಳುಗಿರುವ ಸಾಧ್ಯತೆ ಇದೆ. ರಕ್ಷಣೆಗೆ ಮುಂದಾಗಿದ ಮತ್ತೊಬ್ಬಾಕೆಯೂ ಮುಳುಗಿದ್ದ ಕಾರಣ ಮೂರನೇ ಯುವತಿಯೂ ನೀರಿಗೆ ಇಳಿದಿದ್ದಾಳೆ. ಕೆಲವೇ ನಿಮಿಷದ ಅಂತರದಲ್ಲಿ ಈ ಘಟನೆ ನಡೆದಿದೆ. ಘಟನೆಯ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!