Monday, June 22, 2026
spot_imgspot_img
spot_imgspot_img

ಮಂಗಳೂರು: ನಾಳೆಯಿಂದ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಡಳಿತ ಚಿಂತನೆ!

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಡಳಿತ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.

ಇಂದು ದ.ಕ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆದಿದೆ. ಹಲವು ಕ್ರಮಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನಾಳೆ (ಮೇ.7) ಬೆಳಗ್ಗೆ 6 ರಿಂದ 9 ಗಂಟೆಯ ವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗುವುದು. 10 ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರುವಂತೆ ಸೂಚಿಸಬೇಕೆನ್ನುವ ಸಲಹೆ ಸಭೆಯಲ್ಲಿ ವ್ಯಕ್ತವಾಗಿದ್ದು, ಅಂತಿಮ ತೀರ್ಮಾನ ಸಂಜೆಯೊಳಗೆ ಪ್ರಕಟವಾಗುವ ನಿರೀಕ್ಷೆಯಿದೆ.

- Advertisement -

Related news

error: Content is protected !!