Saturday, June 28, 2025
spot_imgspot_img
spot_imgspot_img

ಮಂಗಳೂರು : ಆಂಧ್ರ ಪ್ರದೇಶದಿಂದ ಗಾಂಜಾ ಸಾಗಾಟ; ಸುಮಾರು 23 ಕೆಜಿ ಗಾಂಜಾ ವಶ

- Advertisement -
- Advertisement -

ಮಂಗಳೂರು: ಆಂಧ್ರ ಪ್ರದೇಶದಿಂದ ಮಂಗಳೂರು ಮತ್ತು ಕೇರಳಕ್ಕೆ ನಿಷೇಧಿತ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, ಸುಮಾರು 23.250 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಯನ್ನು ಕಾಸರಗೋಡು ಜಿಲ್ಲೆಯ ಮೊಯಿದ್ದೀನ್ ಶಬೀರ್ ಎಂದು ಗುರುತಿಸಲಾಗಿದೆ. ವಿಶಾಖಪಟ್ಟಣದಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಶಬೀರ್ ನನ್ನು ನಗರದ ಮುಡಿಪು ಕಾಯಿರಗೋಳಿ ಎಂಬಲ್ಲಿ ಸಿಸಿಬಿ ಪೊಲೀಸರ ತಂಡ ಬಂಧಿಸಿದೆ.

ಬಂಧಿತನಿಂದ ಒಟ್ಟು 12,96,470 ರೂ ಮೌಲ್ಯದ 23.250 ಕೆಜಿ ಗಾಂಜಾ, ಮಹೀಂದ್ರ ಕಾರು ಮತ್ತು ಎರಡು ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಶಬೀರ್ ವಿರುದ್ಧ ಕಾಸರಗೋಡು, ಮಂಜೇಶ್ವರ, ಕುಂಬ್ಳೆ ಮತ್ತು ವಿದ್ಯಾನಗರ ಪೊಲೀಸ್ ಠಾಣೆಗಳಲ್ಲಿ ಕೊಲೆ ಸೇರಿ 12 ಪ್ರಕರಣಗಳು ದಾಖಲಾಗಿದೆ.

- Advertisement -

Related news

error: Content is protected !!