Monday, February 10, 2025
spot_imgspot_img
spot_imgspot_img

ಮಂಗಳೂರು: 86 ಸಿಮ್‌ಕಾರ್ಡ್‌ ಸಹಿತ ಇಬ್ಬರು ಆರೋಪಿಗಳು ಅರೆಸ್ಟ್‌..!

- Advertisement -
- Advertisement -

ಮಂಗಳೂರು: ವಿದೇಶದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರು ನಗರ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ಏರ್‌ಟೆಲ್ ಕಂಪೆನಿಯ 86 ಸಿಮ್‌ ಕಾರ್ಡಗಳು, 2 ಮೊಬೈಲ್ ಪೋನ್‌ಗಳು, ಸ್ವಿಫ್ಟ್ ಕಾರು ಸಹಿತ 5,49,300 ರೂ. ಮೌಲ್ಯದ ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಬೆಳ್ತಂಗಡಿಯ ಶಮದ್ ಮಹಮ್ಮದ್ ಸಮರ್ (26) ಮತ್ತು ಮಹಮ್ಮದ್ ಅಜೀಂ (19) ಎಂದು ಗುರುತಿಸಲಾಗಿದೆ.

ಶಮದ್ ನಗರದ ಕಾಲೇಜೊಂದರ ಬಿಬಿಎ ವಿದ್ಯಾರ್ಥಿಯಾಗಿದ್ದು, ಬಾಡಿಗೆ ಮನೆಯಲ್ಲಿದ್ದ ಮಹಮ್ಮದ್ ಅಜೀಂ ಕೂಡ ನಗರದಲ್ಲೇ ಬಾಡಿಗೆ ಮನೆಯಲ್ಲಿದ್ದ. ಇವರು ಬೆಳ್ತಂಗಡಿಯ ಮುಸ್ತಾಫ ಮತ್ತು ಮಡಂತ್ಯಾರ್‌ನ ಸಾಜೀದ್‌ನ ಸೂಚನೆಯಂತೆ ತಮ್ಮ ಗೆಳೆಯರು ಪರಿಚಿತರಿಗೆ ಸ್ವಲ್ಪ ಹಣ ನೀಡಿ ಪುಸಲಾಯಿಸಿ ಅವರಿಂದ ಸಿಮ್‌ಕಾರ್ಡ್‌ಗಳನ್ನು ಪಡೆದುಕೊಳ್ಳುತ್ತಿದ್ದರು.

ಆರೋಪಿಗಳು ಕಳೆದ ಜನವರಿಯಿಂದಲೇ ಈ ದಂಧೆ ನಡೆಸುತ್ತಿದ್ದು, ಇದುವರೆಗೆ 400ರಿಂದ 500 ಸಿಮಾರ್ಡ್‌ಗಳನ್ನು ಸಂಗ್ರಹಿಸಿಕೊಟ್ಟಿದ್ದಾರೆ. ತನ್ನ ಗೆಳೆಯರು, ಪರಿಚಿತರಿಗೆ 200ರಿಂದ 300 ರೂ. ನೀಡಿ ಸಿಮ್ ಕಾರ್ಡ್‌ಗಳನ್ನು ಖರೀದಿಸಿ ಅದನ್ನು ಮುಸ್ತಾಫ ಮತ್ತು ಸಾಜೀದ್‌ಗೆ ನೀಡುತ್ತಿದ್ದರು ಎಂದು ತಿಳಿದುಬಂದಿದೆ.

ದುಬ್ಬಾ ಹಾಗೂ ಇತರ ಕೆಲವು ದೇಶಗಳಲ್ಲಿರುವ ಸೈಬರ್ ವಂಚಕರು ಭಾರತದ ಸಿಮ್ ಕಾರ್ಡ್‌ಗಳನ್ನು ಖರೀದಿಸಿ ಭಾರತೀಯರಿಗೆ ಕೋಟ್ಯಂತರ ರೂಪಾಯಿ ವಂಚಿಸುತ್ತಾರೆ. ಭಾರತೀಯ ಸಿಮ್‌ಗಳಾದರೆ ಆ ಸಂಖ್ಯೆಯನ್ನು ಬಳಸಿ ಭಾರತೀಯರನ್ನು ನಂಬಿಸಿ ವಂಚಿಸುವುದು ಸುಲಭ ಎಂಬುದು ವಂಚಕರ ಲೆಕ್ಕಾಚಾರ.

ಧರ್ಮಸ್ಥಳ ಪೊಲೀಸರು ಕಳೆದ ಫೆಬ್ರವರಿಯಲ್ಲಿ ಐವರನ್ನು ಬಂಧಿಸಿ ಅವರಿಂದ 42 ಸಿಮ್ ಕಾರ್ಡ್‌ಗಳನ್ನು ವಶಪಡಿಸಿಕೊಂಡಿದ್ದರು. ಈಗ ಮಂಗಳೂರು ನಗರ ಪೊಲೀಸರು ಬಂಧಿಸಿರುವ ಆರೋಪಿಗಳಿಗೂ ಧರ್ಮಸ್ಥಳದಲ್ಲಿ ಬಂಧಿಸಲ್ಪಟ್ಟಿರುವ ಆರೋಪಿಗಳಿಗೂ ಸಂಪರ್ಕವಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!