Wednesday, July 2, 2025
spot_imgspot_img
spot_imgspot_img

ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿ..!

- Advertisement -
- Advertisement -

ಮಂಗಳೂರು: ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ಸಂಭವಿಸಿ, ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾದ ಘಟನೆ ಇಂದು ನಡೆದಿದೆ.

ಇಲ್ಲಿನ ವರ್ಕ್ ಶಾಪ್‌ನಲ್ಲಿ ಚಾರ್ಜ್‌ಗೆ ಹಾಕಿದ್ದ ಒಂದು ಎಲೆಕ್ಟ್ರಿಕ್ ವಾಹನದಲ್ಲಿ ಸ್ಪಾರ್ಕ್ ಉಂಟಾಗಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಟ್ಟು ಎರಡು ವಾಹನಗಳು ಸಂಪೂರ್ಣ ಭಸ್ಮವಾಗಿದೆ. ಪಾರ್ಕಿಂಗ್ ಸ್ಥಳದಲ್ಲಿ ಹತ್ತಕ್ಕೂ ಅಧಿಕ ಬಗ್ಗಿ ಎಲೆಕ್ಟ್ರಿಕ್ ವಾಹನಗಳಿದ್ದವು ಎನ್ನಲಾಗಿದೆ. ಆದರೆ ಅದೃಷ್ಟವಶಾತ್ ಭಾರೀ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಇನ್ನು ಎರಡು ವಾಹನಗಳು ಹೊತ್ತಿ ಉರಿಯುತ್ತಿದ್ದರೂ ಕದ್ರಿ ಅಗ್ನಿ ಶಾಮಕ ದಳ ಕ್ಲಪ್ತ ಸಮಯಕ್ಕೆ ಸ್ಥಳಕ್ಕೆ ಆಗಮಿಸಿರಲಿಲ್ಲ ಎಂಬ ಆರೋಪ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪಿಲಿಕುಳದ ಸಿಬ್ಬಂದಿಗಳೇ ಸೇರಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಅಂತಿಮವಾಗಿ ಅರ್ಧ ಗಂಟೆ ಬಳಿಕ ಕದ್ರಿ ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸಿದೆ. ಅಲ್ಲದೆ ಘಟನಾ ಸ್ಥಳಕ್ಕೆ ಕಾವೂರು ಠಾಣಾ, ಮಂಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!