- Advertisement -
- Advertisement -




ಮಂಗಳೂರು: ನಗರದ ಜೈಲು ರಸ್ತೆಯ ಬಳಿ ಹಳೆ ಮನೆಯೊಂದನ್ನು ಕೆಡವುತ್ತಿದ್ದಾಗ ಗೋಡೆ ಕುಸಿದು ಇಬ್ಬರು ಮೃತಪಟ್ಟ ಘಟನೆ ದಾರುಣ ಘಟನೆ ಮಂಗಳೂರು ನಗರದ ಜೈಲ್ ರೋಡಿನಲ್ಲಿ ಇಂದು ಸಂಭವಿಸಿದೆ.
ಜೇಮ್ಸ್ ಸ್ಯಾಮುವೆಲ್ ಜತ್ತನ್ನ ಮತ್ತು ಅಡ್ವಿನ್ ಮೃತ ದುರ್ದೈವಿಗಳು.
ಗುರುವಾರ ಬೆಳಗ್ಗೆ ಘಟನೆ ನಡೆದಿದ್ದು, ಜೆಸಿಬಿ ಮೂಲಕ ಮನೆ ಕೆಡವುತ್ತಿದ್ದಾಗ ಕಾಂಕ್ರೀಟ್ ಲಿಂಟೆಲ್ ಸಹಿತ ಗೋಡೆ ಮೈಮೇಲೆ ಬಿದ್ದು ಮೃತಪಟ್ಟಿದ್ದಾರೆ.
ಮೃತ ಜೇಮ್ಸ್ ಅವರ ಮನೆ ಇದಾಗಿದ್ದು ಹೊಸ ಮನೆ ಕಟ್ಟಲೆಂದು ಹಳೆ ಮನೆ ಕೆಡವುತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಜೇಮ್ಸ್ ಬಹರೇನ್ ನಲ್ಲಿದ್ದು ಹೊಸ ಮನೆ ಕಟ್ಟಲೆಂದು ರಜೆ ಹಾಕಿ ಊರಿಗೆ ಬಂದಿದ್ದರು. ಎಡ್ವಿನ್ ಅವರು ಜೇಮ್ಸ್ ಅವರ ಸೋದರ ಸಂಬಂಧಿಯಾಗಿದ್ದು, ಜೇಮ್ಸ್ ಮನೆಗೆ ಮಾತುಕತೆಗೆ ಆಗಮಿಸಿದ್ದರು. ಈ ಸಂದರ್ಭ ದುರ್ಘನೆ ನಡೆದು ಇಬ್ಬರು ದಾರುಣ ಅಂತ್ಯ ಕಂಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -