Tuesday, July 21, 2026
spot_imgspot_img
spot_imgspot_img

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್

- Advertisement -
- Advertisement -

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವದಲ್ಲಿ ಈ ಬಾರಿ ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಇತ್ತೀಚೆಗೆ ನಿಧನರಾದ ಯಕ್ಷಗಾನ ರಂಗದ ದಶಾವತಾರಿ, ತೆಂಕುತಿಟ್ಟಿನ ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್ ಹಾಗೂ ದೈವ ನರ್ತಕ ರವೀಶ್ ಪಡುಮಲೆಯವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದೆ ಎಂದು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮಾ.28ರಂದು ಪೂರ್ವಾಹ್ನ 11ಕ್ಕೆ ವಿಶ್ವವಿದ್ಯಾನಿಲಯದ ಆವರಣದ ಮಂಗಳ ಸಭಾಂಗಣದಲ್ಲಿ ಘಟಿಕೋತ್ಸವ ನಡೆಯಲಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿ ಥಾವರ್ ಚಂದ್ ಗೆಹೋಟ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಎಲ್ಲ ಪದವೀಧರ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಹಾಗೂ ವಿವಿಯ ಸಹಕುಲಾಧಿಪತಿಯೂ ಆಗಿರುವ ಡಾ.ಎಂ.ಸಿ. ಸುಧಾಕರ್ ಉಪಸ್ಥಿತರಿರುವರು. ಸಂಸದ ಕ್ಯಾಬ್ರಿಜೇಶ್ ಚೌಟ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

ಈ ಘಟಿಕೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ 162 (ಕಲಾ ನಿಕಾಯ-40, ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯ-92. ವಾಣಿಜ್ಯ ನಿಕಾಯ – 25, ಶಿಕ್ಷಣ ನಿಕಾಯ – 05) ಸಂಶೋಧನಾ ವಿದ್ಯಾರ್ಥಿಗಳು ಡಾಕ್ಟರೇಟ್ ಪದವಿ (ಪಿ.ಎಚ್.ಡಿ.) ಪಡೆಯಲಿದ್ದಾರೆ. ಇವರಲ್ಲಿ 74 (45.67%) ಮಹಿಳೆಯರು ಮತ್ತು 88 (54.32%) ಪುರುಷರು ಹಾಗೂ 11 (ಪುರುಷ-10, ಮಹಿಳೆ-01) ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು ಡಾಕ್ಟರೇಟ್ ಪದವಿ ಪಡೆಯಲಿರುವರು.

56 ಚಿನ್ನದ ಪದಕ ಮತ್ತು 57 ನಗದು ಬಹುಮಾನಗಳಿದ್ದು, ವಿವಿಧ ಸ್ನಾತಕ/ಸ್ನಾತಕೋತ್ತರ ಪದವಿ ಕಾರ್ಯಕ್ರಮಗಳ ಒಟ್ಟು 147 ಬ್ಯಾಂಕ್ ಗಳಲ್ಲಿ ಪ್ರಥಮ ರ್ಯಾಂಕ್ ಗಳಿಸಿರುವ 69 (ಸ್ನಾತಕೋತ್ತರ ಪದವಿ- 50 ಮತ್ತು ಪದವಿ-19) ವಿದ್ಯಾರ್ಥಿಗಳಿಗೆ ಬ್ಯಾಂಕ್ ಪ್ರಮಾಣ ಪತ್ರವನ್ನು ನೀಡಲಾಗುವುದು. ಇದರಲ್ಲಿ ಕಲಾ ನಿಕಾಯದ-17, ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ-40, ವಾಣಿಜ್ಯ ನಿಕಾಯದ -08, ಶಿಕ್ಷಣ ನಿಕಾಯದ -04 ವಿದ್ಯಾರ್ಥಿಗಳಿದ್ದಾರೆ ಎಂದು ಪ್ರೊ.ಧರ್ಮ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕುಲಸಚಿವ ಪ್ರೊ.ದೇವೇಂದ್ರಪ್ಪ (ಪರೀಕ್ಷಾಂಗ )ಗಣೇಶ್ ಸಂಜೀವ (ಪ್ರಭಾರ),ಹಣಕಾಸು ಅಧಿಕಾರಿ ಪಂಚಲಿಂಗಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!