


ಮಂಗಳೂರು ವಿಶ್ವವಿದ್ಯಾಲಯ 2023-24ನೇ ಸಾಲಿನಲ್ಲಿ ನಡೆದ ಬಿ.ಎ. ಪದವಿ ಪರೀಕ್ಷೆಯಲ್ಲಿ ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಕು. ಖದೀಜಾರಾಸ್ಮಿ ಎನ್. 9ನೇ ರ‍್ಯಾಂಕ್ ಗಳಿಸಿರುತ್ತಾರೆ.
ಇವರು ಮಾಣಿಲದ ಸುಮಯ್ಯ ಹಾಗೂ ರಜಾಕ್ ನಾಯರ್‌ಮೂಲೆ ದಂಪತಿ ಪುತ್ರಿಯಾಗಿದ್ದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣವನ್ನು ಮುರುವ ಮಾಣಿಲದಲ್ಲಿ ಪಡೆದಿದ್ದು ವಿಠಲ ಪದವಿ ಪೂರ್ವ ಕಾಲೇಜು ವಿಟ್ಲ ಇಲ್ಲಿ ಪಿ.ಯು.ಸಿ ಶಿಕ್ಷಣವನ್ನು ಪೂರೈಸಿರುತ್ತಾರೆ. ಪ್ರಸ್ತುತ ಇವರು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಆಂಗ್ಲ ಭಾಷಾ ವಿಭಾಗದಲ್ಲಿ ಎಂ.ಎ. ಸ್ನಾತಕೋತ್ತರ ಪದವಿ ವ್ಯಾಸಂಗ ನಡೆಸುತ್ತಿದ್ದಾರೆ.
ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸದಲ್ಲಿ ರ‍್ಯಾಂಕ್‌ಗಳಿಸಿ ವಿಶೇಷ ಸಾಧನೆ ಮಾಡಿದ ಕು. ಖದೀಜಾರಾಸ್ಮಿ ಎನ್. ಇವರಿಗೆ ಕಾಲೇಜು ಆಭಿವೃದ್ಧಿ ಸಮಿತಿ ಆಧ್ಯಕ್ಷರು ಹಾಗೂ ಮಾನ್ಯ ಶಾಸಕ ಅಶೋಕ್ ಕುಮಾರ್ ರೈ ಹಾಗೂ ಸಮಿತಿಯ ಸದಸ್ಯರು, ಕಾಲೇಜಿನ ರಕ್ಷಕ ಶಿಕ್ಷಕ ಸಂಘ, ಹಿರಿಯ ವಿದ್ಯಾರ್ಥಿ ಸಂಘ, ಬೋಧಕ ಹಾಗೂ ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಹೃತ್ಪೂರ್ವಕ ಆಭಿನಂದನೆಗಳನ್ನು ಸಲ್ಲಿಸಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದ್ದಾರೆ.







