Friday, March 21, 2025
spot_imgspot_img
spot_imgspot_img

ಮಂಗಳೂರು: ವಿಧಾನ ಪರಿಷತ್‌ ಉಪಚುನಾವಣೆ- ಮತ ಎಣಿಕೆ ಆರಂಭ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದಂತಹ ವಿಧಾನ ಪರಿಷತ್‌ ಉಪಚುನಾವಣೆಯ ಮತ ಎಣಿಕೆ ಇಂದು ಪ್ರಾರಂಭವಾಗಿದೆ. ಬೆಳಗ್ಗೆ 8 ಗಂಟೆಯಿಂದಲೇ ಮಂಗಳೂರಿನ ಸಂತ ಅಲೋಷಿಯಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಆರಂಭಗೊಂಡಿದೆ.

ಪ್ರಾರಂಭದ ಹಂತದಲ್ಲಿ ಮತಪೆಟ್ಟಿಗೆಗಳನ್ನು ತೆರೆದು ಮೊದಲ ಹಂತದ ಒಟ್ಟು ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಲಾಗುವುದು. ನಂತರ ನಿಗದಿತ ಕೋಟವನ್ನು ಮೊದಲ ಪ್ರಾಶಸ್ತ್ಯದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆ ಮಾಡಿ, ಘೋಷಣೆ ಮಾಡಲಾಗುವುದು ಎಂದು ಹೇಳಲಾಗಿದೆ.

ಕೇಂದ್ರ ಚುನಾವಣಾ ವೀಕ್ಷಕ ಪಂಕಜ್‌ ಕುಮಾರ್‌ ಪಾಂಡೆ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!