Monday, May 6, 2024
spot_imgspot_img
spot_imgspot_img

ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ; 222 ಮಂದಿ ಚಾಲಕರ ಡಿಎಲ್ ರದ್ದು

- Advertisement -G L Acharya panikkar
- Advertisement -

ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ ಹಾಗೂ ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿದ 222 ಮಂದಿ ಚಾಲಕರ ಡಿಎಲ್ ರದ್ದುಗೊಳಿಸಲು ಸಾರಿಗೆ ಇಲಾಖೆಗೆ ಮಂಗಳೂರು ಸಂಚಾರ ಪೊಲೀಸರು ಶಿಫಾರಸ್ಸು ಮಾಡಿದ್ದಾರೆ.

ಜುಲೈ 13 ರಿಂದ ಜುಲೈ 26 ರವರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಚಾಲನೆ ಮಾಡಿರುವ ಹಾಗೂ ಸಂಚಾರ ನಿಯಮ ಪಾಲನೆ ಮಾಡದೇ ಇರುವ ಸವಾರ/ಚಾಲಕರ ಮೇಲೆ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಂಡು ಸವಾರ/ಚಾಲಕರಿಗೆ ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವುದು ಅಗತ್ಯವಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿರುವ 222 ಚಾಲಕರ ಡಿಎಲ್ ರದ್ದು ಮಾಡುವಂತೆ ಸಾರಿಗೆ ಇಲಾಖೆಗೆ ಶಿಫಾರಸ್ಸು ಮಾಡಲಾಗಿದೆ.

ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಕುರಿತು- 113 ಪ್ರಕರಣ
ಪಾನಮತ್ತಾಗಿ ವಾಹನ ಚಾಲನೆ 1,
ಸರಕು ಸಾಗಾಟ ವಾಹನಗಳಲ್ಲಿ ಪ್ರಯಾಣಿಕರ ಸಾಗಾಟ ಪ್ರಕರಣಗಳು -16
ವಾಹನ ಚಲಾಯಿಸುವಾಗ ಮೊಬೈಲ್ ಫೋನ್ ಬಳಕೆ – 4,
ರೆಡ್ ಸಿಗ್ನಲ್ ಜಂಪಿಂಗ್ -5,
ವಾಣಿಜ್ಯ ವಾಹನದಲ್ಲಿ ಪ್ರಯಾಣಿಕರ ಸಾಗಾಟ – 4,
ಟ್ರಿಪಲ್ ರೈಡಿಂಗ್ ಪ್ರಕರಣ -3,
ಹೆಲ್ಮೆಟ್ ಧರಿಸದೆ ಸಂಚಾರ -59,
ಸೀಟ್ ಬೆಲ್ಟ್ ಹಾಕದೆ ಚಾಲನೆ -17

ಒಟ್ಟು 222 ಮಂದಿಯ ಡಿಎಲ್ ರದ್ದತಿಗೆ ಸಾರಿಗೆ ಇಲಾಖೆಗೆ ಶಿಫಾರಸ್ಸು ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Insta: glacharyajewellers
Fb: glacharya
- Advertisement -

Related news

error: Content is protected !!