Tuesday, May 7, 2024
spot_imgspot_img
spot_imgspot_img

ಮಂಗಳೂರು: ಈ ವಾರಾಂತ್ಯವೂ ಇರಲಿದೆ ವೀಕೆಂಡ್ ಕರ್ಫ್ಯೂ!!

- Advertisement -G L Acharya panikkar
- Advertisement -
driving

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಈ ಬಾರಿಯೂ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ.

ಈ ವೀಕೆಂಡ್ ಕರ್ಫ್ಯೂ ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ5ರವರೆಗೆ ಜಾರಿಯಲ್ಲಿರಲಿದೆ. ಆ.21ರ ಶನಿವಾರ ಮತ್ತು ಆ. 22ರ ರವಿವಾರ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದ್ದು, ಈ ಅವಧಿಯಲ್ಲಿ ಅಂಗಡಿ ಮುಂಗಟ್ಟುಗಳನ್ನು ತೆರೆಯುವುದಕ್ಕೆ ಅವಕಾಶವಿದೆ ಹಾಗೂ ಬೀದಿ ಬದಿಗಳಲ್ಲಿ ವ್ಯಾಪಾರ ಮಾಡಬಹುದು.ಈ ಅವಧಿಯೊಳಗೆ ಸಾರ್ವಜನಿಕರು ಅಗತ್ಯ ವಸ್ತುಗಳನ್ನು ಖರೀದಿಸಬಹುದು.

ಆ ಬಳಿಕ ಅನಗತ್ಯವಾಗಿ ಯಾರೂ ತಿರುಗಾಡುವಂತಿಲ್ಲ.ಯಾವುದೇ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶವಿಲ್ಲ, ಆದರೆ ತುರ್ತು ಸೇವೆಗೆ ಅನುಮತಿ ನೀಡಲಾಗಿದೆ. ರೆಸ್ಟೋರೆಂಟ್, ಹೊಟೇಲ್ ಗಳಲ್ಲಿ ಕೇವಲ ಪಾರ್ಸಲ್ ಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ವಿಮಾನ, ರೈಲು, ಬಸ್ ಸಂಚಾರಗಳಿಗೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

- Advertisement -

Related news

error: Content is protected !!