Wednesday, September 23, 2026
spot_imgspot_img
spot_imgspot_img

ಮುಂದಿನ ಎರಡು ದಿನಗಳ ಕಾಲ ಕರಾವಳಿಯಲ್ಲಿ ಯಲ್ಲೋ ಅಲರ್ಟ್ ಘೋಷಣೆ

- Advertisement -
- Advertisement -

ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಹೀಗಾಗಿ ಈ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್‌ ಅನ್ನು ಭಾರತೀಯ ಹವಾಮಾನ ಇಲಾಖೆ ಘೋಷಣೆ ಮಾಡಿದೆ.

ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ತಾಪಮಾನ ಏರಿಕೆಯಾಗಿದ್ದು ಕೆಲವೆಡೆ ಸೋಮವಾರ ಮಧ್ಯಾಹ್ನ, ರಾತ್ರಿ ಮತ್ತು ಮಂಗಳವಾರದಂದು ಮಳೆ ಸುರಿದು ಇಳೆ ತಂಪಾಗಿತ್ತು. ದ.ಕ. ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಬುಧವಾರ ಮತ್ತು ಗುರುವಾರವೂ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯಲ್ಲೋ ಎಲರ್ಟ್ ಘೋಷಿಸಿದೆ. ಮಂಗಳೂರಿನಲ್ಲಿ ಬುಧವಾರ ಬೆಳಗ್ಗೆ ಬಿಸಿಲಿದ್ದರೆ, ಬಳಿಕ ಮೋಡ ಕವಿದ ವಾತಾವರಣ ಸೃಷ್ಟಿಯಾಗಿತ್ತು.

vtv vitla
vtv vitla
- Advertisement -

Related news

error: Content is protected !!