Wednesday, August 5, 2026
spot_imgspot_img
spot_imgspot_img

ಮಂಗಳೂರು: ಕಾಲೇಜಿನಲ್ಲಿ 290 ಗ್ರಾಂ ಗಾಂಜಾ ಪತ್ತೆ: ಪ್ರಕರಣ ದಾಖಲು

- Advertisement -
- Advertisement -

ಮಂಗಳೂರು: ಕಾಲೇಜಿನಲ್ಲಿ ಮಾದಕವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮಗಳ ಬಳಿಕ ಆಡಳಿತ ಮಂಡಳಿ ನಿಗಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿ ನಡೆಸಿದ ತಪಾಸಣೆಯಲ್ಲಿ ಸುಮಾರು 290 ಗ್ರಾಂ ಗಾಂಜಾ ಹಲವು ಸಣ್ಣ ಪ್ಯಾಕೆಟ್‌ಗಳಲ್ಲಿ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾಲೇಜು ಆಡಳಿತ ಮಾಹಿತಿ ನೀಡಿದ ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಂಜಾವನ್ನು ವಶಪಡಿಸಿಕೊಂಡು, ವಿದ್ಯಾರ್ಥಿಗಳ ವೈದ್ಯಕೀಯ ಪರೀಕ್ಷೆ ನಡೆಸಿದರು. ಪರೀಕ್ಷೆಯಲ್ಲಿ ಮೂವರೂ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.

ಈ ಸಂಬಂಧ ಎನ್‌ಡಿಪಿಎಸ್ (NDPS) ಕಾಯ್ದೆಯ ಸೆಕ್ಷನ್ 8(c) ಹಾಗೂ 27(b) (ಮಾದಕ ವಸ್ತು ಸೇವನೆ) ಸೇರಿದಂತೆ ವಿವಿಧ ಕಲಂಗಳಡಿ ಎಫ್‌ಐಆರ್ ದಾಖಲಿಸಲಾಗಿದೆ.

ಕಾಲೇಜಿಗೆ ಗಾಂಜಾವನ್ನು ತಂದಿದ್ದಾನೆ ಎನ್ನಲಾದ ವಿದ್ಯಾರ್ಥಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿದ್ಯಾರ್ಥಿಯ ಶೈಕ್ಷಣಿಕ ಹಿನ್ನೆಲೆ ಹಾಗೂ ಪ್ರಕರಣದ ಸಂದರ್ಭವನ್ನು ಪರಿಗಣಿಸಿದ ನ್ಯಾಯಾಲಯವು ಶೂರಿಟಿ ಆಧಾರದ ಮೇಲೆ ಜಾಮೀನು ಮಂಜೂರು ಮಾಡಿದೆ.

ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸಿದ್ದ ಪೆಡ್ಲರ್‌ಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಕಾಲೇಜುಗಳಲ್ಲಿ ಮಾದಕವಸ್ತು ವಿರೋಧಿ ಜಾಗೃತಿ ಅಭಿಯಾನಗಳ ಜೊತೆಗೆ ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಹಲವು ಶಿಕ್ಷಣ ಸಂಸ್ಥೆಗಳ ಆಂಟಿ ಡ್ರಗ್ ಸಮಿತಿಗಳು (ADC) ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇದೇ ರೀತಿಯ ಬದ್ಧತೆಯನ್ನು ಎಲ್ಲಾ ಕಾಲೇಜುಗಳು ತೋರಿದರೆ, ಅಲ್ಪಾವಧಿಯಲ್ಲೇ ಸಂಪೂರ್ಣ ಮಾದಕವಸ್ತು ಮುಕ್ತ ಹಾಗೂ ಆರೋಗ್ಯಕರ ಕ್ಯಾಂಪಸ್‌ಗಳನ್ನು ನಿರ್ಮಿಸಲು ಸಾಧ್ಯ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

- Advertisement -

Related news

error: Content is protected !!