Friday, May 17, 2024
spot_imgspot_img
spot_imgspot_img

ಮಂಗಳೂರು: ಅಡ್ಯಾರ್‌ ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಸೇವಿಸಿ ಅಸ್ವಸ್ಥ ಪ್ರಕರಣ; ಆರೋಗ್ಯ ಇಲಾಖೆಯ ಕೈ ಸೇರಿದ ಪ್ರಯೋಗಾಲಯ ಪರೀಕ್ಷಾ ವರದಿ ಬಹಿರಂಗ..!

- Advertisement -G L Acharya panikkar
- Advertisement -

ಮಂಗಳೂರು: ನಗರದ ಹೊರ ವಲಯದಲ್ಲಿ ಎಳನೀರು ಕುಡಿದು ಹಲವರು ಅಸ್ವಸ್ಥಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಪ್ರಯೋಗಾಲಯ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈಸೇರಿದ್ದು ಸಹಜವಾಗಿತ್ತು ಎಂದು ವರದಿಯಲ್ಲಿ ತಿಳಿಸಲಾಗಿದೆ.

ನಗರದ ಹೊರವಲಯದ ಅಡ್ಯಾರಿನ ಬೊಂಡ ಫ್ಯಾಕ್ಟರಿಯಲ್ಲಿ ಏ.9ರಂದು ಖರೀದಿಸಿದ ಎಳನೀರು ಕುಡಿದವರಲ್ಲಿ 138 ಜನರು ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡಿದ್ದರು. ಈ ಪ್ರಕರಣ ಗಮನಕ್ಕೆ ಬಂದ ಬೆನ್ನಲ್ಲೇ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಹಾಗೂ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಫ್ಯಾಕ್ಟರಿಯನ್ನು ಬಂದ್ ಮಾಡಿಸಿ ಎಳನೀರು ಮಾದರಿ ಪ್ರಯೋಗಾಲಯಕ್ಕೆ ಕಳುಹಿಸಿದ್ದರು.

ಘಟನೆ ನಡೆದ ಎರಡು ದಿನಗಳ ನಂತರ ಇದು ಗಮನಕ್ಕೆ ಬಂದಿದ್ದು ಆ ದಿನ ಫ್ಯಾಕ್ಟರಿಯಲ್ಲಿ ಸಂಗ್ರಹಿಸಿದ್ದ ಎಳನೀರನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪ್ರಯೋಗಾಲಯ ಪರೀಕ್ಷೆಯ ವರದಿ ಏ.22ರಂದು ಆರೋಗ್ಯ ಇಲಾಖೆಯ ಕೈ ಸೇರಿದೆ.

ಅಸ್ವಸ್ಥಗೊಂಡವರ ಮಲ ಮತ್ತು ರಕ್ತದ ಮಾದರಿ ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವರದಿ ಪ್ರಕಾರ ಕೆಲವರ ದೇಹದಲ್ಲಿ ಇಕೊಲೈ ಬ್ಯಾಕ್ಟಿರಿಯಾ ಇರುವುದು ಪತ್ತೆಯಾಗಿದೆ. ಮನುಷ್ಯನ ಕರುಳಿನಲ್ಲಿ ಈ ಬ್ಯಾಕ್ಟಿರಿಯಾ ಇರುತ್ತದೆ. ಆದರೆ ಅವುಗಳ ಪ್ರಮಾಣ ಹೆಚ್ಚಾದರೆ, ಕೆಲವೊಮ್ಮೆ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ತಿಳಿಸಿದರು.

ಕಾರ್‌ಸ್ಟ್ರೀಟ್ ಮತ್ತು ಕದ್ರಿಯಲ್ಲಿರುವ ಎಳನೀರು ಮಳಿಗೆ, ಅಡ್ಯಾರಿನಲ್ಲಿರುವ ಎಳನೀರು ಗಂಜಿಯಿಂದ ಐಸ್‌ಕ್ರೀಮ್ ತಯಾರಿಸುವ ಘಟಕಗಳನ್ನು ಬಂದ್ ಮಾಡಿಸಲಾಗಿದೆ. ಈಗಲೂ ಅವು ಬಂದ್ ಆಗಿಯೇ ಇವೆ. ಫ್ಯಾಕ್ಟರಿಯವರು ಸ್ವಯಂ ಪ್ರೇರಿತರಾಗಿ ಎಳನೀರು ನೀಡುವುದನ್ನು ನಿಲ್ಲಿಸಿದ್ದಾರೆ. ಅಡ್ಯಾರ್‌ನಲ್ಲಿ ಪಲ್ಟಿಂಗ್ ಘಟಕಗಳು ಮಾತ್ರ ಕಾರ್ಯಾಚರಿಸುತ್ತಿವೆ. ಗ್ರಾಹಕರಿಗೆ ಆಹಾರ ನೀಡುವಾಗ ನಿಯಮ ಪಾಲನೆ, ಶುಚಿತ್ವಕ್ಕೆ ಸಂಬಂಧಿಸಿ ಕೆಲವು ಅಂಶಗಳ ಕಟ್ಟುನಿಟ್ಟು ಪಾಲನೆಗೆ ಆಹಾರ ಸುರಕ್ಷಾ ಅಫಿದಾವಿತ್ ನ್ನು ಫ್ಯಾಕ್ಟರಿಯಿಂದ ಪಡೆಯಲು ಆಹಾರ ಸುರಕ್ಷಾ ಅಧಿಕಾರಿಗೆ ಸೂಚನೆ ನೀಡಲಾಗುವುದು ಎಂದು ಅವರು ಪ್ರತಿಕ್ರಿಯಿಸಿದರು.

ಬಿಸಿಗಾಳಿ, ತಾಪಮಾನ ಹೆಚ್ಚಳ ಆಗುತ್ತಿರುವುದರಿಂದ ಜನರು ಆರೋಗ್ಯ ಕಾಳಜಿ ವಹಿಸಬೇಕು. ಆರೋಗ್ಯ ಇಲಾಖೆ ವಿಶೇಷ ನಿಗಾ ವಹಿಸಿದ್ದು, ಯಾವುದೇ ಪ್ರಕರಣ ದಾಖಲಾದರೂ ಇಲಾಖೆ ಗಮನಕ್ಕೆ ತರುವಂತೆ ಎಲ್ಲ ತಾಲೂಕು ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ. ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಎಂದು ಅವರು ತಿಳಿಸಿದರು.

- Advertisement -

Related news

error: Content is protected !!