Saturday, June 28, 2025
spot_imgspot_img
spot_imgspot_img

ಮಂಗಳೂರು: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ..!

- Advertisement -
- Advertisement -

ಮಂಗಳೂರು: ಇಲ್ಲಿನ ಕುಲಶೇಖರ ಚರ್ಚ್ ಬಳಿಯ ಅಂಗಡಿಯ ಹಿಂದೆ ಕೊಳೆತ ಶವ ಪತ್ತೆಯಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.

ಮೃತ ವ್ಯಕ್ತಿಯನ್ನು ಶಕ್ತಿನಗರದ ನಿವಾಸಿ ಸುರೇಂದ್ರ (46) ಎಂದು ಗುರುತಿಸಲಾಗಿದೆ.

ಸುರೇಂದ್ರ ಅಪಸ್ಮಾರದಿಂದ ಬಳಲುತ್ತಿದ್ದರು ಮತ್ತು ಆ ಪ್ರದೇಶದಲ್ಲಿ ಕಸ ಸಂಗ್ರಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಅಂಗಡಿಯ ಹಿಂಭಾಗದ ಶೌಚಾಲಯದ ಬಳಿ ಕೊಳೆತ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ.

ಕದ್ರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಸಹಾಯಕ ಪೊಲೀಸ್ ಆಯುಕ್ತ ಪ್ರತಾಪ್ ಸಿಂಹ ಥೋರಟ್ ಕೂಡ ಪರಿಶೀಲನೆ ನಡೆಸಿದ್ದಾರೆ. ಪೊಲೀಸರಿಂದ ತನಿಖೆ ನಡೆಯುತ್ತಿದೆ.

- Advertisement -

Related news

error: Content is protected !!