Tuesday, April 30, 2024
spot_imgspot_img
spot_imgspot_img

ಮಂಗಳೂರು: ಸಾರ್ವಜನಿಕರ ಎದುರೇ ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಖಾಸಗಿ ಬಸ್‌ನ ನಿರ್ವಾಹಕ

- Advertisement -G L Acharya panikkar
- Advertisement -
vtv vitla

ಮಂಗಳೂರು: ಮಹಿಳೆಯೋರ್ವರಿಗೆ ಸಾರ್ವಜನಿಕರ ಎದುರೇ ಖಾಸಗಿ ಬಸ್‌ನ ನಿರ್ವಾಹಕ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ವೃತ್ತಿಯಲ್ಲಿ ವಕೀಲೆಯಾಗಿರುವ ಮಹಿಳೆಯೊಬ್ಬರು ಪಿವಿಎಸ್ ಸರ್ಕಲ್ ಬಳಿ ಬೋಂದೆಲ್ ನಿಂದ ಸ್ಟೆಟ್ ಬ್ಯಾಂಕ್ ಗೆ ತೆರಳು ಆಶೆಲ್ ರೂಟ್ ನಂಬರ್ 19 ಬಸ್ ನ್ನು ಹತ್ತಲು ಹೋಗಿದ್ದಾರೆ. ಈ ವೇಳೆ ಬಸ್ ಡ್ರೈವರ್ ಎಕಾಏಕಿ ಬಸ್ ನ್ನು ಚಲಾಯಿಸಿದ್ದು, ಮಹಿಳೆ ರಸ್ತೆಗೆ ಬೀಳುವ ವೇಳೆ ಬಸ್ ನ ನಿರ್ವಾಹಕ ಮಹಿಳೆಯ ಕೈಯನ್ನು ಹಿಡಿದು ಎಳೆದು ಬಸ್‌ನಲ್ಲಿದ್ದ ಸಾರ್ವಜನಿಕರ ಎದುರೇ “ನೀವು ಮುಸ್ಲಿಂ ಹೆಂಗಸರಿಗೆ ತುಂಬಾ ಅಹಂಕಾರ ಬೇಕಾದರೆ ನಮ್ಮ ಬಸ್ಸಲ್ಲಿ ಬರಬೇಕು ಇಲ್ಲದಿದ್ದರೆ ಇಳಿಯಬೇಕು ಎಂದು ” ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಕುರಿತಂತೆ ವಕೀಲೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement -

Related news

error: Content is protected !!